ಮುಂಬೈ: ಎಡಗೈ ಬ್ಯಾಟರ್ ಇಶಾನ್ ಕಿಶನ್ (81*) ಹಾಗೂ ನಾಯಕ ರೋಹಿತ್ ಶರ್ಮಾ (41) ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು, ಐಪಿಎಲ್‌ನಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 177 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.
ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟಮುಂಬೈಗೆ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 8.2 ಓವರ್‌ಗಳಲ್ಲಿ 67 ರನ್‌ಗಳ ಜೊತೆಯಾಟ ಕಟ್ಟಿದರು.
32 ಎಸೆತಗಳನ್ನು ಎದುರಿಸಿದ ರೋಹಿತ್ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 41 ರನ್ ಗಳಿಸಿದರು.
ಕುಲ್‌ದೀಪ್ ಮೋಡಿ...
ಈ ಹಂತದಲ್ಲಿ ದಾಳಿಗಿಳಿದ ಕುಲ್‌ದೀಪ್ ಯಾದವ್, ಮುಂಬೈ ಓಟಕ್ಕೆ ಕಡಿವಾಣ ಹಾಕಿದರು. ರೋಹಿತ್ ಜೊತೆಗೆ ಅನ್ಮೋಲ್‌ಪ್ರೀತ್ ಸಿಂಗ್ (8) ಅವರನ್ನು ಹೊರದಬ್ಬಿದರು.
ಈ ನಡುವೆ ತಿಲಕ್ ವರ್ಮಾ ಪ್ರಭಾವಿ ಇನ್ನಿಂಗ್ಸ್ ಕಟ್ಟಿದರು. 15 ಎಸೆತಗಳಲ್ಲಿ ಮೂರು ಬೌಂಡರಿಗಳ ನೆರವಿನಿಂದ 22 ರನ್ ಗಳಿಸಿದರು.
ಬಳಿಕ ಕೀರನ್ ಪೊಲಾರ್ಡ್ (3) ಕೂಡ ಕುಲ್‌ದೀಪ್ ಬಲೆಗೆ ಬಿದ್ದರು. 18 ರನ್ ಮಾತ್ರ ಬಿಟ್ಟುಕೊಟ್ಟ ಕುಲ್‌ದೀಪ್ ಮೂರು ವಿಕೆಟ್ ಕಬಳಿಸಿ ಮಿಂಚಿದರು.
ಇಶಾನ್ 34 ಎಸೆತಗಳಲ್ಲಿ ಫಿಫ್ಟಿ ಸಾಧನೆ...
ಇನ್ನೊಂದೆಡೆ ಇಶಾನ್ ಕಿಶನ್ 34 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
ಈ ಮೂಲಕ ಮುಂಬೈ ಉತ್ತಮ ಮೊತ್ತ ಪೇರಿಸಲು ನೆರವಾದರು. 48 ಎಸೆತಗಳನ್ನು ಎದುರಿಸಿದ ಇಶಾನ್ 11 ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 81 ರನ್ ಗಳಿಸಿ ಔಟಾಗದೆ ಉಳಿದರು.
ಡೆಲ್ಲಿ ಪರ ಕುಲ್‌ದೀಪ್ ಮೂರು ಹಾಗೂ ಖಲೀಲ್ ಅಹಮದ್ ಎರಡು ವಿಕೆಟ್ ಗಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.