ಚೆನ್ನೈ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ದೀಪಕ್ ಚಾಹರ್, ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಕನಿಷ್ಠ ನಾಲ್ಕು ತಿಂಗಳು ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಇದರಿಂದಾಗಿ ಆಸ್ಟ್ರೇಲಿಯಾದಲ್ಲಿ ಪ್ರಸಕ್ತ ಸಾಲಿನಲ್ಲಿ (ಅಕ್ಟೋಬರ್-ನವೆಂಬರ್) ನಡೆಯಲಿರುವ ಟ್ವೆಂಟಿ-20 ವಿಶ್ವಕಪ್‌ಗೂ ಟೀಮ್ ಇಂಡಿಯಾದ ಆಯ್ಕೆಗೆ ಲಭ್ಯರಾಗುವ ಸಾಧ್ಯತೆಗಳಿಲ್ಲ ಎಂದು ವರದಿಯಾಗಿದೆ.
ದೀಪಕ್ ಚಾಹರ್ ಸ್ಕ್ಯಾನ್ ವರದಿಯಂತೆ ಕನಿಷ್ಠ ನಾಲ್ಕು ತಿಂಗಳ ವಿಶ್ರಾಂತಿ ಬೇಕಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದ ಚಾಹರ್, ಬೌಲಿಂಗ್ ಅಭ್ಯಾಸವನ್ನು ಪುನರಾರಂಭಿಸಿದ್ದರು. ಆದರೆ ಬೆನ್ನಿನ ಗಾಯದ ಕಾರಣ ಐಪಿಎಲ್ ಟೂರ್ನಿಗೆ ಅಲಭ್ಯರಾಗಿದ್ದರು.
ಐಪಿಎಲ್‌ನಲ್ಲಿ ದೀಪಕ್ ಚಾಹರ್ ಅವರನ್ನು ₹14 ಕೋಟಿ ನೀಡಿ ಚೆನ್ನೈ ತಂಡವು ಖರೀದಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.