ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಗೆ ಹಾರ್ದಿಕ್ ಪಾಂಡ್ಯ ಭಾಜನರಾಗಿದ್ದಾರೆ.
1,046 ಎಸೆತಗಳಲ್ಲಿ ಹಾರ್ದಿಕ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ರಿಷಭ್ ಪಂತ್ (1,224 ಎಸೆತ) ಸಾಧನೆಯನ್ನು ಹಿಮ್ಮೆಟ್ಟಿಸಿದ್ದಾರೆ.
ಐಪಿಎಲ್ 2022 ಟೂರ್ನಿಯಲ್ಲಿ ನೂತನ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿರುವ ಪಾಂಡ್ಯ, ಸೋಮವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವಪಂದ್ಯದಲ್ಲಿ ಸ್ಮರಣೀಯ ದಾಖಲೆ ಬರೆದಿದ್ದಾರೆ.
ಏತನ್ಮಧ್ಯೆ ವೆಸ್ಟ್‌ಇಂಡೀಸ್‌ನ ದೈತ್ಯ ಬ್ಯಾಟರ್ ಕ್ರಿಸ್ ಗೇಲ್, ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಗೇಲ್ ಒಟ್ಟು 357 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಎಬಿ ಡಿ ವಿಲಿಯರ್ಸ್ 251 ಸಿಕ್ಸರ್ ಗಳಿಸಿದ್ದಾರೆ.
ಭಾರತೀಯರ ಪೈಕಿ ರೋಹಿತ್ ಶರ್ಮಾ 231 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.