ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಸ್ಥಾನವನ್ನು ತೊರೆದಿರುವ ವಿರಾಟ್ ಕೊಹ್ಲಿ ಈ ಬಾರಿ 600ಕ್ಕೂ ಹೆಚ್ಚು ರನ್ ಗಳಿಸಲಿದ್ದಾರೆ ಎಂದು ಆರ್‌ಸಿಬಿಯ ಮಾಜಿ ತಾರೆ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಫಫ್ ಡುಪ್ಲೆಸಿ ನಾಯಕನಾಗಿ ಬಂದಿರುವುದು ಎಲ್ಲರಿಗೂ ತಿಳಿದಿದೆ. ಆದರೆ ನನಗೆ ಅತ್ಯಂತ ರೋಮಾಂಚನ ಹುಟ್ಟಿಸಿರುವ ವಿಷಯವೆಂದರೆ ನಾಯಕ ಸ್ಥಾನ ತ್ಯಜಿಸಿರುವ ವಿರಾಟ್ ಕೊಹ್ಲಿ ಒತ್ತಡ ರಹಿತವಾಗಿ ಆಡಬಹುದಾಗಿದೆ ಎಂದು ಹೇಳಿದ್ದಾರೆ.
ವಿರಾಟ್‌ರಿಂದ ನಾನು ದೊಡ್ಡ ಸೀಸನ್ ನಿರೀಕ್ಷೆ ಮಾಡುತ್ತಿದ್ದೇನೆ. ಈ ವರ್ಷ ಅವರು 600ಕ್ಕೂ ಹೆಚ್ಚು ರನ್ ಗಳಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 205 ರನ್ ಪೇರಿಸಿಯೂ ಆರ್‌ಸಿಬಿ ಸೋಲಿಗೆ ಶರಣಾಗಿತ್ತು. ನಾಯಕ ಫಫ್ ಡುಪ್ಲೆಸಿ 88 ಹಾಗೂ ವಿರಾಟ್ ಕೊಹ್ಲಿ 41* ರನ್ ಗಳಿಸಿದ್ದರು.
ಇಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಸವಾಲನ್ನು ಎದುರಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.