ಮುಂಬೈ: ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಬ್ಯಾಟರ್ ನಿತೀಶ್ ರಾಣಾ ಅವರಿಗೆ ಪಂದ್ಯದ ಸಂಭಾವನೆಯ ಶೇ 10ರಷ್ಟು ದಂಡ ಮತ್ತು ಮುಂಬೈ ಇಂಡಿಯನ್ಸ್ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರಿಗೆ ಎಚ್ಚರಿಕೆ ನೀಡಲಾಗಿದೆ.
ಬುಧವಾರ ನಡೆದ ಕೊಲ್ಕತ್ತ ಮತ್ತು ಮುಂಬೈ ನಡುವಣ ಪಂದ್ಯದಲ್ಲಿ ಇವರಿಬ್ಬರೂಲೆವಲ್ –1 ನಿಯಮ ಉಲ್ಲಂಘನೆ ಮಾಡಿದ್ದರು ಎಂದು ಐಪಿಎಲ್ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿತೀಶ್ ಮತ್ತು ಬೂಮ್ರಾ ಅವರು ತಮ್ಮ ತಪ್ಪನ್ನು ವಿಚಾರಣೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದಾರೆ. ಅಶಿಸ್ತಿನ ವರ್ತನೆಗಾಗಿ ಈ ದಂಡ ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.