ADVERTISEMENT

IPL 2022: ಸಿಎಸ್‌ಕೆ ವೇಗಿ ಆ್ಯಡಂ ಮಿಲ್ನೆಗೆ ಗಾಯ, ಶ್ರೀಲಂಕಾದ ಮಥೀಶಾಗೆ ಅವಕಾಶ

ಪಿಟಿಐ
Published 21 ಏಪ್ರಿಲ್ 2022, 9:47 IST
Last Updated 21 ಏಪ್ರಿಲ್ 2022, 9:47 IST
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು –ಪಿಟಿಐ ಚಿತ್ರ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು –ಪಿಟಿಐ ಚಿತ್ರ   

ಮುಂಬೈ: ಇಂಡಿಯನ್‌ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್‌) ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ಆ್ಯಡಂ ಮಿಲ್ನೆ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಮಿಲ್ನೆ ಅವರ ಬದಲಿಗೆ ಶ್ರೀಲಂಕಾದ ಯುವ ವೇಗಿ ಮಥೀಶಾ ಪತಿರಾನಾ ಅವರು ಸಿಎಸ್‌ಕೆ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಮಾ. 26 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ಮೂಲದ ಮಿಲ್ನೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

ADVERTISEMENT

ಶ್ರೀಲಂಕಾದ 19 ವರ್ಷದ ಮಥೀಶಾ ಪತಿರಾನಾ, 2020 ಮತ್ತು 2022ರಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಸದ್ಯ ಮಥೀಶಾ, ₹20 ಲಕ್ಷ ಮುಖಬೆಲೆಗೆ ಸಿಎಸ್‌ಕೆ ತಂಡದ ಪಾಲಾಗಿದ್ದು, ಇಂದು ನಡೆಯಲಿರುವ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಮಥೀಶಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.