ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಲಖನೌ ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಖನೌ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿದೆ.
ಕನ್ನಡಿಗ ಕೆ.ಎಲ್.ರಾಹುಲ್ 56 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಮೇತ 74 ರನ್ ಗಳಿಸಿದರು. ಕೈಲ್ ಮೇಯರ್ಸ್ 29, ಕೃಣಾಲ್ ಪಾಂಡ್ಯ 18 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆದರೆ, ದೀಪಕ್ ಹೂಡಾ, ನಿಕೊಲಸ್ ಪೂರನ್, ಕೃಷ್ಣಪ್ಪ ಗೌತಮ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಪಂಜಾಬ್ ಪರ ಸ್ಯಾಮ್ ಕರನ್ 3, ಕಗಿಸೊ ರಬಾಡ 2 ವಿಕೆಟ್ ಪಡೆದರೆ, ಹರ್‌ಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್ ಹಾಗೂ ಸಿಕಂದರ್ ರಜಾ ತಲಾ ಒಂದೊಂದು ವಿಕೆಟ್ ಪಡೆದರು.
ಶಿಖರ್ ಧವನ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹಾಗಾಗಿ ಪಂಜಾಬ್ ತಂಡವನ್ನು ಸ್ಯಾಮ್ ಕರನ್ ಮುನ್ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.