ADVERTISEMENT

IPL 2024 | ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ

ಪಿಟಿಐ
Published 18 ಮೇ 2024, 10:19 IST
Last Updated 18 ಮೇ 2024, 10:19 IST
<div class="paragraphs"><p>ರೋಹಿತ್ ಶರ್ಮಾ</p></div>

ರೋಹಿತ್ ಶರ್ಮಾ

   

(ಪಿಟಿಐ ಚಿತ್ರ)

ಮುಂಬೈ: 'ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ' ಎಂದು ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.

ADVERTISEMENT

ಆದರೆ ಈ ಬಗ್ಗೆ ತಲೆಕೆಡಿಸಿಕೊಳ್ಳುವುದರ ಬದಲು ನ್ಯೂನತೆಗಳನ್ನು ಸರಿಪಡಿಸುವುದರತ್ತ ಗಮನ ಹರಿಸಿದ್ದೇನೆ ಎಂದು ಹೇಳಿದ್ದಾರೆ.

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್‌ನಲ್ಲಿ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದು, ಕೊನೆಯ ಸ್ಥಾನಕ್ಕೆ ಕುಸಿದಿದೆ.

ಪ್ರಸಕ್ತ ಸಾಲಿನ ಐಪಿಎಲ್ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ನೂತನ ಕಪ್ತಾನರಾಗಿ ನೇಮಕಗೊಳಿಸಲಾಗಿತ್ತು. ಇದು ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.

'ಪ್ರದರ್ಶನದ ಬಗ್ಗೆ ಚಿಂತಿಸದೇ ಉತ್ತಮ ಮನಸ್ಥಿತಿಯಲ್ಲಿ ಇರಲು ಪ್ರಯತ್ನಿಸುತ್ತೇನೆ. ಅಭ್ಯಾಸವನ್ನು ಮುಂದುವರಿಸುತ್ತೇನೆ. ನನ್ನ ಆಟದಲ್ಲಿನ ನ್ಯೂನತೆಗಳನ್ನು ಸುಧಾರಿಸುವತ್ತ ಗಮನ ಹರಿಸುತ್ತೇನೆ. ಹೆಚ್ಚು ತಲೆಕಡಿಸಿಕೊಂಡರೆ ಆಟದ ಮೇಲೂ ಅಡ್ಡ ಪರಿಣಾಮ ಬೀರಬಹುದು' ಎಂದು ರೋಹಿತ್ ಹೇಳಿದ್ದಾರೆ.

'ಈ ಬಾರಿಯ ಐಪಿಎಲ್ ಆವೃತ್ತಿ ಯೋಜನೆಯಂತೆ ನಡೆಯಲಿಲ್ಲ. ಹಲವಾರು ತಪ್ಪುಗಳನ್ನು ಮಾಡಿದ್ದರಿಂದ ಹಿನ್ನಡೆಯಾಗಿದೆ. ಗೆಲ್ಲಲೇಬೇಕಾಗಿದ್ದ ಹಲವು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದೇವೆ. ಇದು ಐಪಿಎಲ್‌ನ ಸ್ವರೂಪವಾಗಿದೆ. ಅವಕಾಶಗಳು ಬಂದಾಗ ಅದನ್ನು ಕಸಿದುಕೊಳ್ಳಬೇಕಾಗುತ್ತದೆ' ಎಂದು ರೋಹಿತ್ ಹೇಳಿದರು.

ಆದರೂ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟರ್ ಎನಿಸಿಕೊಂಡಿದ್ದಾರೆ. 14 ಪಂದ್ಯಗಳಲ್ಲಿ 32.08ರ ಸರಾಸರಿಯಲ್ಲಿ (150 ಸ್ಟ್ರೈಕ್‌ರೇಟ್) 417 ರನ್ ಗಳಿಸಿದ್ದಾರೆ. ಇದರಲ್ಲಿ ತಲಾ ಒಂದು ಶತಕ ಹಾಗೂ ಅರ್ಧಶತಕ ಸೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.