ADVERTISEMENT

2 ತಿಂಗಳ ವಿರಾಮದಲ್ಲಿ ಕುಟುಂಬದೊಂದಿಗೆ ಅಮೂಲ್ಯ ಸಮಯ: ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮಾರ್ಚ್ 2024, 7:41 IST
Last Updated 26 ಮಾರ್ಚ್ 2024, 7:41 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ಪಿಟಿಐ ಚಿತ್ರ)

ಬೆಂಗಳೂರು: ವೈಯಕ್ತಿಕ ಕಾರಣದಿಂದಾಗಿ ಕಳೆದ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದಾರೆ.

ADVERTISEMENT

ವಿಶ್ವದ ಶ್ರೀಮಂತ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಕೊಹ್ಲಿ, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಅಲ್ಲದೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ದಂಪತಿಗೆ ಎರಡನೇ ಮಗು ಜನಿಸಿದೆ. ಈ ಕುರಿತು ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದರು. ಎರಡು ತಿಂಗಳ ಈ ಬಿಡುವಿನ ವೇಳೆಯಲ್ಲಿ ಕುಟುಂಬದ ಜತೆ ಅಮೂಲ್ಯ ಸಮಯ ಕಳೆದಿರುವುದಾಗಿ ಹೇಳಿದ್ದಾರೆ.

'ನಾವು ದೇಶದಲ್ಲಿ ಇರಲಿಲ್ಲ. ಜನರು ನಮ್ಮನ್ನು ಗುರುತಿಸಲು ಸಾಧ್ಯವಾಗದ ಜಾಗದಲ್ಲಿ ನಾವಿದ್ದೆವು. ಎರಡು ತಿಂಗಳ ಕಾಲ ಕುಟುಂಬದೊಂದಿಗೆ ಅಮೂಲ್ಯ ಸಮಯವನ್ನು ಕಳೆದಿದ್ದೇನೆ. ನನ್ನ ಹಾಗೂ ಕುಟುಂಬಕ್ಕೆ ಇದು ಅದ್ಭುತ ಅನುಭವವಾಗಿತ್ತು' ಎಂದು ಹೇಳಿದ್ದಾರೆ.

'ಇಬ್ಬರು ಮಕ್ಕಳ ತಂದೆಯಾಗಿ, ಕುಟುಂಬದ ಜವಾಬ್ದಾರಿ ನೋಡಿಕೊಳ್ಳುವುದು ಸಂಪೂರ್ಣ ಭಿನ್ನವಾಗಿರುತ್ತದೆ. ಹಾಗಾಗಿ ಕುಟುಂಬದ ಜತೆಗಿನ ಕ್ಷಣ ಅದ್ಭುತವಾಗಿತ್ತು. ಈ ಅವಕಾಶ ಸಿಕ್ಕಿರುವುದಕ್ಕೆ ದೇವರಿಗೆ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.