ADVERTISEMENT

IPL 2024: ಐಪಿಎಲ್‌ನಲ್ಲಿ 200 ಸಿಕ್ಸರ್; ಗೇಲ್, ರೋಹಿತ್ ಸಾಲಿಗೆ ರಸೆಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮಾರ್ಚ್ 2024, 2:43 IST
Last Updated 24 ಮಾರ್ಚ್ 2024, 2:43 IST
<div class="paragraphs"><p>ಆ್ಯಂಡ್ರೆ ರಸೆಲ್</p></div>

ಆ್ಯಂಡ್ರೆ ರಸೆಲ್

   

(ಪಿಟಿಐ ಚಿತ್ರ)

ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ವೆಸ್ಟ್‌ಇಂಡೀಸ್‌ನ ಸ್ಫೋಟಕ ಬ್ಯಾಟರ್ ಆ್ಯಂಡ್ರೆ ರಸೆಲ್, 200 ಸಿಕ್ಸರ್‌ಗಳ ಸಾಧನೆ ಮಾಡಿದ್ದಾರೆ.

ADVERTISEMENT

ಆ ಮೂಲಕ ಐಪಿಎಲ್‌ನಲ್ಲಿ 200 ಅಥವಾ ಅದಕ್ಕಿಂತಲೂ ಸಿಕ್ಸರ್ ಗಳಿಸಿದ ಎಲೈಟ್ ಬ್ಯಾಟರ್‌ಗಳ ಸಾಲಿಗೆ ಸೇರ್ಪಡೆಗೊಂಡಿದ್ದಾರೆ.

ಐಪಿಎಲ್‌ ಇತಿಹಾಸದಲ್ಲೇ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ವಿಂಡೀಸ್‌ನವರೇ ಆದ ಮಾಜಿ ಆಟಗಾರ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ. ಗೇಲ್ ಒಟ್ಟು 357 ಸಿಕ್ಸರ್ ಸಿಡಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಭಾರತದ ರೋಹಿತ್ ಶರ್ಮಾ (257) ಹಾಗೂ ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ (251) ಇದ್ದಾರೆ.

ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ಡೇವಿಡ್ ವಾರ್ನರ್, ಕೀರಾನ್ ಪೊಲಾರ್ಡ್ ಹಾಗೂ ಸುರೇಶ್ ರೈನಾ, ಐಪಿಎಲ್‌ನಲ್ಲಿ 200ಕ್ಕೂ ಹೆಚ್ಚು ಸಿಕ್ಸರ್ ಗಳಿಸಿದ ಇತರೆ ಬ್ಯಾಟರ್‌ಗಳಾಗಿದ್ದಾರೆ.

ಐಪಿಎಲ್‌ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರಸೆಲ್, ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಏಳು ಸಿಕ್ಸರ್‌ಗಳನ್ನು ಬಾರಿಸಿದ್ದರು. ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ರಸೆಲ್, ಕೆಕೆಆರ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಅಂತಿಮವಾಗಿ ರಸೆಲ್ 25 ಎಸೆತಗಳಲ್ಲಿ ಅಜೇಯ 64 ರನ್ ಗಳಿಸಿದರು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೆಕೆಆರ್ ನಾಲ್ಕು ರನ್ ಅಂತರದ ರೋಚಕ ಗೆಲುವು ದಾಖಲಿಸಿತು. ಬೌಲಿಂಗ್‌ನಲ್ಲೂ ಎರಡು ವಿಕೆಟ್ ಪಡೆದು ಮಿಂಚಿದ ರಸೆಲ್, ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ:

  • ಕ್ರಿಸ್ ಗೇಲ್ (357)

  • ರೋಹಿತ್ ಶರ್ಮಾ (257)

  • ಎಬಿ ಡಿವಿಲಿಯರ್ಸ್ (251)

  • ಮಹೇಂದ್ರ ಸಿಂಗ್ ಧೋನಿ (239)

  • ವಿರಾಟ್ ಕೊಹ್ಲಿ (235)

  • ಡೇವಿಡ್ ವಾರ್ನರ್ (228)

  • ಕೀರಾನ್ ಪೊಲಾರ್ಡ್ (223)

  • ಸುರೇಶ್ ರೈನಾ (203)

  • ಆ್ಯಂಡ್ರೆ ರಸೆಲ್ (200*)

ಆ್ಯಂಡ್ರೆ ರಸೆಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.