ನವದೆಹಲಿ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೊಂಡಿದೆ.
ಮಾರ್ಚ್ 22ರಂದು ಉದ್ಘಾಟನಾ ಪಂದ್ಯದಲ್ಲಿ ಚೊಚ್ಚಲ ಟ್ರೋಫಿ ಎದುರು ನೋಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಈ ಪಂದ್ಯವು ಚೆನ್ನೈಯಲ್ಲಿ ನಡೆಯಲಿದೆ.
ಸಾರ್ವತ್ರಿಕ ಚುನಾವಣೆ; ಮೊದಲ 17 ದಿನಗಳ ವೇಳಾಪಟ್ಟಿ ಬಿಡುಗಡೆ...
ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಅವಧಿಯಲ್ಲಿ 10 ನಗರಗಳಲ್ಲಾಗಿ ಒಟ್ಟು 21 ಪಂದ್ಯಗಳು ನಡೆಯಲಿವೆ.
ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಬಿಡುಗಡೆಗೊಳಿಸಿದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.
ಸಾರ್ವತ್ರಿಕ ಚುನಾವಣೆ ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ.
ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿದ್ದು, ತಲಾ ಐದು ತಂಡಗಳನ್ನು ಎರಡು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಲೀಂಗ್ ಹಂತದಲ್ಲಿ ಎಲ್ಲ ತಂಡಗಳು ತಲಾ 14 ಪಂದ್ಯಗಳನ್ನು ಆಡಲಿವೆ.
ಐಪಿಎಲ್ 2024 ವೇಳಾಪಟ್ಟಿ(ಮೊದಲ 21 ಪಂದ್ಯಗಳ ವೇಳಾಪಟ್ಟಿ ಬಿಡುಗಡೆ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.