ಬೆಂಗಳೂರು: ಐಪಿಎಲ್‌ನ ಎಲ್ಲ 10 ತಂಡಗಳು ತಮ್ಮ ಆಟಗಾರರನ್ನು ಉಳಿಸಿಕೊಳ್ಳುವ ಪ್ರಕ್ರಿಯೆಯನ್ನು ಗುರುವಾರ ಅಂತಿಮಗೊಳಿಸಿದ್ದು, ರಿಟೇನರ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಇದರೊಂದಿಗೆ ಎಲ್ಲ ಫ್ರಾಂಚೈಸಿಗಳ ಪ್ರಮುಖ ಆಟಗಾರರು ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆಯಾಗಲು ಸಿದ್ಧರಾಗಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ರಿಷಭ್ ಪಂತ್, ಲಖನೌ ಸೂಪರ್ ಜೈಂಟ್ಸ್ ತಂಡದಿಂದ ಕೆ.ಎಲ್. ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಫಫ್ ಡುಪ್ಲೆಸಿ, ಮೊಹಮ್ಮದ್ ಸಿರಾಜ್, ಮುಂಬೈ ಇಂಡಿಯನ್ಸ್ ತಂಡದಿಂದ ಇಶಾನ್ ಕಿಶನ್ ಸೇರಿದಂತೆ ಪ್ರಮುಖ ಆಟಗಾರರನ್ನು ಆಯಾ ಫ್ರಾಂಚೈಸಿಗಳು ಬಿಟ್ಟುಕೊಟ್ಟಿವೆ.
ಆದರೆ ಐಪಿಎಲ್ ಮೆಗಾ ಹರಾಜಿನಲ್ಲಿ ಬಿಡ್ ಸಲ್ಲಿಸಿ ಮಗದೊಮ್ಮೆ ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಅವಕಾಶ ಫ್ರಾಂಚೈಸಿಗಳ ಮುಂದಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಫ್ ಡುಪ್ಲೆಸಿ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್, ಪೃಥ್ವಿ ಶಾ, ಖಲೀಲ್ ಅಹ್ಮದ್.
ಲಖನೌ ಸೂಪರ್ ಜೈಂಟ್ಸ್: ಕೆ.ಎಲ್. ರಾಹುಲ್, ದೇವದತ್ತ ಪಡಿಕ್ಕಲ್.
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್.
ರಾಜಸ್ಥಾನ ರಾಯಲ್ಸ್: ಆರ್. ಅಶ್ವಿನ್, ಯಜುವೇಂದ್ರ ಚಾಹಲ್, ಜೋಸ್ ಬಟ್ಲರ್, ಪ್ರಸಿದ್ಧ ಕೃಷ್ಣ.
ಕೋಲ್ಕತ್ತ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್.
ಪಂಜಾಬ್ ಕಿಂಗ್ಸ್: ಅರ್ಷದೀಪ್ ಸಿಂಗ್, ಜಿತೇಶ್ ಶರ್ಮಾ, ರಾಹುಲ್ ಚಾಹರ್.
ಸನ್‌ರೈಸರ್ಸ್ ಹೈದರಾಬಾದ್: ಭುವನೇಶ್ವರ್ ಕುಮಾರ್, ಅಬ್ದುಲ್ ಸಮದ್, ಉಮ್ರಾನ್ ಮಲಿಕ್.
ಗುಜರಾತ್ ಟೈಟನ್ಸ್: ಮೊಹಮ್ಮದ್ ಶಮಿ.
ಚೆನ್ನೈ ಸೂಪರ್ ಕಿಂಗ್ಸ್: ಶಾರ್ದೂಲ್ ಠಾಕೂರ್, ದೀಪಕ್ ಚಾಹರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.