ಜೆದ್ದಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕಳೆದ ಹಲವು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿದ್ದ ಬಲಗೈ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ತನ್ನ ಬಳಿಯಲ್ಲೇ ಉಳಿಸಿಕೊಳ್ಳುವಲ್ಲಿ ಫ್ರಾಂಚೈಸಿ ವಿಫಲವಾಗಿದೆ.
ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಬರೋಬ್ಬರಿ ₹12.2ಕೋಟಿಗೆ ಗುಜರಾತ್ ಟೈಟನ್ಸ್ ಖರೀದಿಸಿದೆ.
ಇದರೊಂದಿಗೆ ಆರ್ಸಿಬಿ ತಂಡಕ್ಕೆ ಸಿರಾಜ್ ಗುಡ್ ಬೈ ಹೇಳಿದ್ದಾರೆ.
ಆರ್ಸಿಬಿಗೆ ಲಿಯಾಮ್ ಲಿವಿಂಗ್ಸ್ಟೋನ್...
ಮತ್ತೊಂದೆಡೆ ₹12.2ಕೋಟಿ ನೀಡಿ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಆರ್ಸಿಬಿ ಖರೀದಿಸಿದೆ.
ಇಂಗ್ಲೆಂಡ್ನ ಸ್ಫೋಟಕ ಬ್ಯಾಟರ್ ಆಗಿರುವ ಲಿವಿಂಗ್ಸ್ಟೋನ್, ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಕ್ಯಾಪ್ ಧರಿಸಿ ಕಣಕ್ಕಿಳಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.