ಜೆದ್ದಾ: ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ನಿರೀಕ್ಷೆಯಂತೆಯೇ ರಿಷಭ್ ಪಂತ್ ಭಾರಿ ಮೊತ್ತಕ್ಕೆ ಮಾರಾಟವಾಗಿದ್ದಾರೆ.
ರಿಷಭ್ ಪಂತ್ ಅವರನ್ನು ₹27 ಕೋಟಿಗೆ ಲಖನೌ ಸೂಪರ್‌ಜೈಂಟ್ಸ್ ಫ್ರಾಂಚೈಸಿ ಖರೀದಿಸಿದೆ.
ಕೊನೆಯ ಹಂತದಲ್ಲಿ ಪಂತ್ ಖರೀದಿಗೆ ಲಖನೌ ₹27 ಕೋಟಿಯ ಭಾರಿ ಮೊತ್ತದ ಬಿಡ್ ಸಲ್ಲಿಸಿತು. ಈ ವೇಳೆ 'ರೈಟ್ ಟು ಮ್ಯಾಚ್' ಕಾರ್ಡ್ ಬಳಕೆ ಮಾಡಲು ಡೆಲ್ಲಿ ಕ್ಯಾಪಿಟಲ್ಸ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಪಂತ್ ಲಖನೌ ಪಾಲಾದರು.
ಇದರೊಂದಿಗೆ ರಿಷಭ್ ಪಂತ್ ಐಪಿಎಲ್ ಇತಿಹಾಸದಲ್ಲೇ (ಈವರೆಗಿನ) ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ಆಟಗಾರ ಎನಿಸಿದ್ದಾರೆ.
ರಿಷಭ್ ಪಂತ್ ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಲಖನೌ ತಂಡದ ನಾಯಕರಾಗುವ ಸಾಧ್ಯತೆಗಳಿವೆ.
ಇದಕ್ಕೊ ಮೊದಲು ತೀವ್ರ ಜಿದ್ದಾಜಿದ್ದಿನಿಂದ ಸಾಗಿದ ಹರಾಜು ಪ್ರಕ್ರಿಯೆಯಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ₹26.75 ಕೋಟಿ ನೀಡಿ ಪಂಜಾಬ್ ಕಿಂಗ್ಸ್ ಖರೀದಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.