ADVERTISEMENT

ಟೀಮ್ ಇಂಡಿಯಾದಲ್ಲಿ ಬೂಮ್ರಾ ಅನುಪಸ್ಥಿತಿ ಕಾಡುತ್ತಿದೆ: ಹಾರ್ದಿಕ್ ಪಾಂಡ್ಯ

ಪಿಟಿಐ
Published 21 ಸೆಪ್ಟೆಂಬರ್ 2022, 10:51 IST
Last Updated 21 ಸೆಪ್ಟೆಂಬರ್ 2022, 10:51 IST
ಜಸ್‌ಪ್ರೀತ್ ಬೂಮ್ರಾ ಮತ್ತು ಹಾರ್ದಿಕ್ ಪಾಂಡ್ಯ
ಜಸ್‌ಪ್ರೀತ್ ಬೂಮ್ರಾ ಮತ್ತು ಹಾರ್ದಿಕ್ ಪಾಂಡ್ಯ   

ಮೊಹಾಲಿ: ವೇಗಿ ಜಸ್‌ಪ್ರೀತ್ ಬೂಮ್ರಾ ಅವರ ಅನುಪಸ್ಥಿತಿ ಟೀಮ್ ಇಂಡಿಯಾವನ್ನು ಕಾಡುತ್ತಿದೆ ಎಂದು ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದ ಬಳಿಕ ಮಾತನಾಡಿದ ಅವರು, ಬೂಮ್ರಾ ಮೇಲೆ ಹೆಚ್ಚಿನ ಒತ್ತಡ ಹೇರಲಾಗದು. ಗಾಯದಿಂದ ಗುಣಮುಖರಾದ ಬಳಿಕ ತಂಡಕ್ಕೆ ಮರಳಲು ಸಾಕಷ್ಟು ಸಮಯಾವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಬೂಮ್ರಾ ಅವರು ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ತಂಡದಲ್ಲಿ ಇರಲಿಲ್ಲ.

ADVERTISEMENT

ಮಂಗಳವಾರ ರಾತ್ರಿ ಮೊಹಾಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡವು 20 ಓವರ್‌ಗಳಲ್ಲಿ ಆರು ವಿಕೆಟ್‌ ನಷ್ಟಕ್ಕೆ 208 ರನ್ ಗಳಿಸಿತ್ತು. ಬೃಹತ್‌ ಮೊತ್ತವನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ 19.2 ಓವರ್‌ಗಳಲ್ಲಿ 211 ರನ್‌ ಗಳಿಸಿ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು.

ಅಕ್ಷರ್ ಪಟೇಲ್ ಹೊರತುಪಡಿಸಿ, ಭಾರತದ ಎಲ್ಲ ಬೌಲರ್‌ಗಳು ಪ್ರತಿ ಓವರ್‌ಗೆ 11 ರನ್‌ಗಿಂತಲೂ ಹೆಚ್ಚು ರನ್ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.