ADVERTISEMENT

ICC Womens World Cup: ಏಕದಿನ ಕ್ರಿಕೆಟ್‌ನಲ್ಲಿ ಜೂಲನ್ 250 ವಿಕೆಟ್ ದಾಖಲೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2022, 5:42 IST
Last Updated 16 ಮಾರ್ಚ್ 2022, 5:42 IST
ಜೂಲನ್ ಗೋಸ್ವಾಮಿ
ಜೂಲನ್ ಗೋಸ್ವಾಮಿ   

ಮೌಂಟ್ ಮೌಂಗನೂಯಿ: ಭಾರತದಆಟಗಾರ್ತಿ ಜೂಲನ್ ಗೋಸ್ವಾಮಿ, ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್ ಗಳಿಸಿದ ವಿಶ್ವದ ಮೊದಲ ಬೌಲರ್ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವಐಸಿಸಿ ಮಹಿಳೆಯರ ವಿಶ್ವಕಪ್ ಟೂರ್ನಿಯಲ್ಲಿ ಜೂಲನ್ ಗೋಸ್ವಾಮಿ ಈ ಸ್ಮರಣೀಯ ದಾಖಲೆ ನಿರ್ಮಿಸಿದರು.

ಬುಧವಾರ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿ ಟಮ್ಮಿ ಬೊಮಂಟ್ ವಿಕೆಟ್ ಕಬಳಿಸಿದ ಗೋಸ್ವಾಮಿ ಹೊಸ ಮೈಲಿಗಲ್ಲು ತಲುಪಿದರು.

199ನೇ ಏಕದಿನ ಪಂದ್ಯದಲ್ಲಿ ಜೂಲನ್ ನೂತನ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಕ್ಯಾಥರಿನ್ ಫಿಟ್ಜ್‌ಪ್ಯಾಟ್ರಿಕ್ ಅವರಿಗಿಂತಲೂ (180 ವಿಕೆಟ್) 70 ವಿಕೆಟ್‌ಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಮಹಿಳೆಯರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲೂ ಅತಿ ಹೆಚ್ಚು ವಿಕೆಟ್ ಗಳಿಸಿದದಾಖಲೆಗೆ ಜೂಲನ್ ಭಾಜನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.