ಕೋಲ್ಕತ್ತ: ಆತಿಥೇಯ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ಐಪಿಎಲ್–2023 ಟಿ20 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಆಯ್ದುಕೊಂಡಿದೆ.
ಎರಡೂ ತಂಡಗಳಿಗೆ ಪ್ಲೇ ಆಫ್ ಪ್ರವೇಶಿಸುವ ಹಾದಿ ಕಠಿಣವಾಗಿದೆ. ಉಭಯ ತಂಡಗಳು ಇದುವರೆಗೆ ತಲಾ 10 ಪಂದ್ಯಗಳಲ್ಲಿ ಕಣಕ್ಕಿಳಿದಿವೆ. ಶಿಖರ್ ಧವನ್ ನಾಯಕತ್ವದ ಪಂಜಾಬ್ ಐದು ಗೆಲುವಿನೊಂದಿಗೆ ಹತ್ತು ಅಂಕ ಹೊಂದಿದ್ದರೆ, ನಿತೀಶ್ ರಾಣಾ ನೇತೃತ್ವದ ಕೋಲ್ಕತ್ತ 8 ಅಂಕಗಳನ್ನು ಹೊಂದಿದೆ.
ಹೀಗಾಗಿ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಪಂದ್ಯದಲ್ಲಿ ಉಭಯ ತಂಡಗಳು ತುರುಸಿನ ಹಣಾಹಣಿ ನಡೆಸುವ ನಿರೀಕ್ಷೆ ಇದೆ. ಈ ತಂಡಗಳು ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಿದ್ದಾಗ ಪಂಜಾಬ್ ಗೆದ್ದಿತ್ತು.
ಕೋಲ್ಕತ್ತ ತಂಡದಲ್ಲಿರುವ ಆಲ್‌ರೌಂಡರ್ ಸುನಿಲ್ ನಾರಾಯಣ್, ರಹಮನ್‌ವುಲ್ಲಾ ಗರ್ಬಜ್, ಆ್ಯಂಡ್ರೆ ರಸೆಲ್ ಹಾಗೂ ರಿಂಕು ಸಿಂಗ್ ಅವರ ಮೇಲೆ ಬ್ಯಾಟಿಂಗ್ ವಿಭಾಗ ಅವಲಂಬಿತವಾಗಿದೆ.
ಬೌಲರ್‌ಗಳಾದ ವರುಣ ಚಕ್ರವರ್ತಿ, ಸುಯಶ್ ಶರ್ಮಾ, ಮಧ್ಯಮವೇಗಿ ಶಾರ್ದೂಲ್ ಠಾಕೂರ್ ಹಾಗೂ ವೈಭವ್ ಅರೋರಾ ಅವರು ಉತ್ತಮ ಲಯದಲ್ಲಿದ್ದಾರೆ. ಇವರ ಮುಂದೆ ಪಂಜಾಬ್ ತಂಡದ ಶಿಖರ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಶಾರೂಕ್ ಖಾನ್ ಅವರಿಗೆ ತಡೆಯೊಡ್ಡುವ ಸವಾಲು ಇದೆ.
ಸ್ಯಾಮ್ ಕರನ್, ಆರ್ಷದೀಪ್ ಸಿಂಗ್ ಪಂಜಾಬ್ ತಂಡದ ಬೌಲಿಂಗ್ ಶಕ್ತಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.