ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ ಕೃಷ್ಣ, ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮತ್ತು 4ನೇ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಸೂರ್ಯ ಕುಮಾರ್ ಯಾದವ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ವೇಗದ ಬೌಲರ್ ಪ್ರಸಿದ್ಧ ಕೃಷ್ಣ ಮತ್ತು ಕೃಣಾಲ್ ಅವರು ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ಅವಕಾಶ ಪಡೆದಿದ್ದಾರೆ. ಸೂರ್ಯ ಕುಮಾರ್ ಯಾದವ್ ಅವರ ಆಯ್ಕೆಯಲ್ಲಿ ಯಾವುದೇ ಅಚ್ಚರಿ ಇಲ್ಲ. ಭಾರತ 8 ರನ್‌ಗಳಿಂದ ಗೆದ್ದ 4ನೇ ಟಿ20 ಪಂದ್ಯದಲ್ಲಿ 31 ಎಸೆತಗಳಲ್ಲಿ 57 ರನ್ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದರು.
ಮಾರ್ಚ್ 23ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಎಲ್ಲ ಮೂರು ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ.
ಭಾರತದ ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ ಮತ್ತು ಶಾರ್ದುಲ್ ಠಾಕೂರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.