ADVERTISEMENT

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾದ ವೇಗಿ ಲಸಿತ್ ಮಾಲಿಂಗ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2021, 13:22 IST
Last Updated 14 ಸೆಪ್ಟೆಂಬರ್ 2021, 13:22 IST
ಲಸಿತ್ ಮಾಲಿಂಗ: ಪಿಟಿಐ ಚಿತ್ರ
ಲಸಿತ್ ಮಾಲಿಂಗ: ಪಿಟಿಐ ಚಿತ್ರ   

ನವದೆಹಲಿ: ಶ್ರೀಲಂಕಾದ ಶ್ರೇಷ್ಠ ವೇಗದ ಬೌಲರ್ ಲಸಿತ್ ಮಾಲಿಂಗ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅವರು, ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ನನ್ನ ಅನುಭವವನ್ನು ಯುವ ಪೀಳಿಗೆಯೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

'ನಾನು ಟಿ 20 ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದು, ಈ ಮೂಲಕ ನಾನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ’ ಎಂದು ಮಾಲಿಂಗ ತನ್ನ ಯೂಟ್ಯೂಬ್ ಚಾನೆಲ್‌ನ ವಿಡಿಯೊದಲ್ಲಿ ಹೇಳಿದ್ದಾರೆ. ನನ್ನ ಶೂಗಳಿಗೆ ವಿಶ್ರಾಂತಿ ಕೊಡುತ್ತಿದ್ಧೇನೆ. ಆದರೆ, ಆಟದ ಮೇಲಿನ ನನ್ನ ಪ್ರೀತಿ ಎಂದಿಗೂ ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

‘ನಿವೃತ್ತಿ ಹೊಂದಿದರೂ ನಾನು ಯುವ ಪೀಳಿಗೆಯನ್ನು ನಿರಂತರವಾಗಿ ಬೆಂಬಲಿಸುತ್ತಿರುತ್ತೇನೆ. ಆಟದ ಉತ್ಸಾಹವನ್ನು ಹೆಚ್ಚಿಸುವ ಮತ್ತು ಆಟವನ್ನು ಪ್ರೀತಿಸುವ ಎಲ್ಲರೊಂದಿಗೆ ನಾನು ಯಾವಾಗಲೂ ಇರುತ್ತೇನೆ’ ಎಂದು ಹೇಳಿದ್ದಾರೆ.

ಇದೇವೇಳೆ, ಶ್ರೀಲಂಕಾ ಕ್ರಿಕೆಟ್ ಮತ್ತು ಐಪಿಎಲ್‌ನ ಮುಂಬೈ ಇಂಡಿಯನ್ಸ್ ಸೇರಿದಂತೆ ಆಡಿದ ಎಲ್ಲಾ ಫ್ರಾಂಚೈಸಿಗಳಿಗೆ ಧನ್ಯವಾದ ಹೇಳಿದ್ಧಾರೆ.

ಈ ವರ್ಷದ ಜನವರಿಯಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಿಂದ ಮಾಲಿಂಗ ನಿವೃತ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.