ನವದೆಹಲಿ: ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಲೋಕಸಭೆಯಲ್ಲಿ ಸೋಮವಾರ ಅಭಿನಂದಿಸಲಾಯಿತು.
'ದೇಶದ ಯುವಕರು ಮತ್ತು ಕ್ರೀಡಾಪಟುಗಳು ಈ ಗೆಲುವಿನಿಂದ ಸ್ಫೂರ್ತಿ ಪಡೆಯುತ್ತಾರೆ' ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು. ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಬಿರ್ಲಾ ಅಭಿನಂದನೆ ಸಲ್ಲಿಸಿದರು.
ಜೂನ್ 29 ರಂದು ಬಾರ್ಬಡೋಸ್ನ ಬ್ರಿಜ್ಟೌನ್ನಲ್ಲಿ ನಡೆದ ಫೈನಲ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಮಣಿಸುವ ಮೂಲಕ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.