ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ ಅವರನ್ನು ಮರು ನೇಮಕ ಮಾಡಲಾಗಿದೆ.
2017ರಿಂದ 2022ರ ಅವಧಿಯಲ್ಲಿ ಜಯವರ್ಧನೆ ಕೋಚ್ ಹುದ್ದೆಯನ್ನು ವಹಿಸಿದ್ದರು. ಅಲ್ಲದೆ 2017, 2019 ಮತ್ತು 2020-21ನೇ ಸಾಲಿನಲ್ಲಿ ಮುಂಬೈ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಈಗ ಎರಡು ವರ್ಷಗಳ ಅವಧಿಯ ಬಳಿಕ ಕೋಚ್ ಹುದ್ದೆಗೆ ಜಯವರ್ಧನೆ ಮರಳಿದ್ದಾರೆ. ಈ ಮೊದಲು ಮುಂಬೈ ಇಂಡಿಯನ್ಸ್ ಕ್ರಿಕೆಟ್‌ನ ಜಾಗತಿಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.
ಇನ್ನು ಕೆಲವೇ ದಿನಗಳಲ್ಲಿ ಮೆಗಾ ಹರಾಜು ನಡೆಯಲಿರುವಂತೆಯೇ ಈ ಬೆಳವಣಿಗೆ ಕಂಡುಬಂದಿದೆ. ನಿರ್ಗಮಿತ ಕೋಚ್, ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಮಾರ್ಕ್ ಬೌಚರ್ ಅವರಿಗೆ ಮುಂಬೈ ಫ್ರಾಂಚೈಸಿ ಧನ್ಯವಾದಗಳನ್ನು ಸಲ್ಲಿಸಿದೆ.
ಮುಂಬೈ ಇಂಡಿಯನ್ಸ್, 2023ನೇ ಸಾಲಿನಲ್ಲಿ ನಾಕೌಟ್ ಹಂತವನ್ನು ಪ್ರವೇಶಿಸಿದ್ದರೂ 2024ರಲ್ಲಿ 14 ಪಂದ್ಯಗಳ ಪೈಕಿ ಕೇವಲ ನಾಲ್ಕು ಪಂದ್ಯಗಳಲ್ಲಿ ಜಯ ಗಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.