ADVERTISEMENT

IND vs ENG: ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ;3ನೇ ಟೆಸ್ಟ್‌ಗೆ ಮಾರ್ಕ್ ವುಡ್ ಅಲಭ್ಯ

ಪಿಟಿಐ
Published 23 ಆಗಸ್ಟ್ 2021, 13:40 IST
Last Updated 23 ಆಗಸ್ಟ್ 2021, 13:40 IST
ಮಾರ್ಕ್ ವುಡ್
ಮಾರ್ಕ್ ವುಡ್   

ಲೀಡ್ಸ್: ಪ್ರವಾಸಿ ಭಾರತ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿರುವ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಮೂರನೇ ಟೆಸ್ಟ್ ಪಂದ್ಯಕ್ಕೆ ಗಾಯಾಳು ಮಾರ್ಕ್ ವುಡ್ ಸೇವೆಯಿಂದ ಆತಿಥೇಯ ಇಂಗ್ಲೆಂಡ್ ತಂಡವು ವಂಚಿತವಾಗಿದೆ. ಇದರೊಂದಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಭಾರತ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭುಜ ನೋವಿನ ತೊಂದರೆ ಅನುಭವಿಸಿದ್ದ ಮಾರ್ಕ್ ವುಡ್, ಇನ್ನು ಚೇತರಿಸಿಕೊಂಡಿಲ್ಲ. ಅಲ್ಲದೆ ಮೂರನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಿರುವುದಿಲ್ಲ ಎಂದು ಇಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ 151 ರನ್‌ ಅಂತರದ ರೋಚಕ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ.

ಆದರೂ ಇಂಗ್ಲೆಂಡ್ ಪರ ಪ್ರಭಾವಿ ದಾಳಿ ಸಂಘಟಿಸಿರುವ ಮಾರ್ಕ್ ವುಡ್, ಪಂದ್ಯದಲ್ಲಿ ಒಟ್ಟು ಐದು ವಿಕೆಟ್‌ಗಳನ್ನು ಕಬಳಿಸಿದ್ದರು.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25ರಂದು ಆರಂಭವಾಗಲಿದೆ.

ಗಾಯದ ಸಮಸ್ಯೆ ಎದುರಿಸುತ್ತಿರುವ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಸೇವೆಯಿಂದಲೂ ಇಂಗ್ಲೆಂಡ್ ವಂಚಿತವಾಗಿದೆ. ಜೋಫ್ರಾ ಆರ್ಚರ್ ಹಾಗೂ ಬೆನ್ ಸ್ಟೋಕ್ಸ್ ಸಹ ಅಲಭ್ಯರಾಗಿದ್ದಾರೆ. ಇದರಿಂದಾಗಿ ಹಿನ್ನೆಡೆ ಅನುಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.