ಮೆಲ್ಬರ್ನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೇನ್ ಅವರು ಅಂಗಣದಲ್ಲಿ ನಡೆಸಿದ ವಾಗ್ಯುದ್ಧ ‘ಸಾಮಾನ್ಯ’ವಾದದ್ದು ಎಂದು ಹೇಳಿರುವ ಆಸ್ಟ್ರೇಲಿಯಾದ ಹಿರಿಯ ಆಟಗಾರ ಮೈಕ್ ಹಸ್ಸಿ ಇಬ್ಬರೂ ಎಲ್ಲೆ ಮೀರದೆ ವರ್ತಿಸಿದ್ದಾರೆ ಎಂದಿದ್ದಾರೆ.
‘ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿಕೆಟ್‌ಗಳು ಬಿದ್ದಾಗ ಕೊಹ್ಲಿ ಅವರಿಗೆ ಸಂತಸ ತಡೆಯಲಾಗಲಿಲ್ಲ. ಆದ್ದರಿಂದ ಅವರ ವರ್ತನೆ ಕೆಲವರಿಗೆ ಅತಿ ಎನಿಸಿರಬಹುದು’ ಎಂದು ಹಸ್ಸಿ ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ತಂಡ ಸೇರಲಿ: ಮೆಲ್ಬರ್ನ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಸಾಮರ್ಥ್ಯ ತೋರಬೇಕಾದರೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಅವಕಾಶ ನೀಡಬೇಕು ಎಂದು ಹಸ್ಸಿ ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.