ಶಾರ್ಜಾ: ಅಫ್ಗಾನಿಸ್ತಾನದ ಆಲ್‌ರೌಂಡರ್ ಮೊಹಮ್ಮದ್ ನಬಿ ಅವರು ಪಾಕಿಸ್ತಾನದಲ್ಲಿ ಮುಂದಿನ ವರ್ಷ ನಿಗದಿಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ.
ಸೋಮವಾರ ಇಲ್ಲಿ ಬಾಂಗ್ಲಾದೇಶ ವಿರುದ್ಧ ಅಫ್ಗಾನಿಸ್ತಾನ 2–1ರರಲ್ಲಿ ಸರಣಿ ಗೆದ್ದ ನಂತರ ಮಾತನಾಡಿದ, 39 ವರ್ಷ ವಯಸ್ಸಿನ ನಬಿ, ಕಳೆದ ವರ್ಷದ ನವೆಂಬರ್‌ನಲ್ಲಿ ಏಕದಿನ ವಿಶ್ವಕಪ್ ನಂತರ ನಿವೃತ್ತಿಯ ಯೋಜನೆ ಮನದಲ್ಲಿ ಸುಳಿದಾಡುತಿತ್ತು ಎಂದಿದ್ದಾರೆ.
ಬಾಂಗ್ಲಾ ವಿರುದ್ಧ ಸರಣಿಯಲ್ಲಿ ಅವರು ಸರಣಿಯ ಆಟಗಾರ ಗೌರವಕ್ಕೆ ಪಾತ್ರರಾಗಿದ್ದರು. 2009ರಲ್ಲಿ ಪದಾರ್ಪಣೆ ಮಾಡಿದ ನಂತರ ನಬಿ 167 ಏಕದಿನ ಪಂದ್ಯಗಳನ್ನು ಆಡಿದ್ದು, 147 ಇನಿಂಗ್ಸ್‌ಗಳಿಂದ 3,600 ರನ್ (ಸರಾಸರಿ 27.48) ಗಳಿಸಿದ್ದಾರೆ. 86.99 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. 161 ಇನಿಂಗ್ಸ್‌ಗಳಿಂದ 172 ವಿಕೆಟ್‌ಗಳನ್ನು ಗಳಿಸಿದ್ದಾರೆ. ಒಮ್ಮೆ (17ಕ್ಕೆ5) ಐದು ವಿಕೆಟ್ ಗೊಂಚಲು ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.