ಕ್ರಿಕೆಟ್ ಲೋಕದ 'ರನ್ ಮಷಿನ್' ಖ್ಯಾತಿಯ ವಿರಾಟ್ ಕೊಹ್ಲಿ, ಇದೀಗ ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್ ಎನಿಸಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ ಕೊಹ್ಲಿ, ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ, ರಿಯಾನ್ ಪರಾಗ್ ಕ್ಯಾಚ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಫೀಲ್ಡರ್‌ಗಳಲ್ಲಿ ಒಬ್ಬರೆನಿಸಿರುವ ಕೊಹ್ಲಿ, ಐಪಿಎಲ್‌ನಲ್ಲಿ ತಮ್ಮ ಅಮೋಘ ಕ್ಷೇತ್ರರಕ್ಷಣೆ ಮೂಲಕ ಇದುವರೆಗೆ ಒಟ್ಟು 110 ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಅಟ್ಟಿದ್ದಾರೆ. ಐಪಿಎಲ್ ಆರಂಭದಿಂದಲೂ ಆರ್‌ಸಿಬಿ ತಂಡದ ಪರ ಆಡುತ್ತಿರುವ ಕೊಹ್ಲಿ ಈವರೆಗೆ 242 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.
ಐಪಿಎಲ್‌ನಲ್ಲಿ ಅತಿಹೆಚ್ಚು ಕ್ಯಾಚ್ ಪಡೆದ ದಾಖಲೆ 'ಮಿಸ್ಟರ್ ಐಪಿಎಲ್' ಖ್ಯಾತಿಯ ಸುರೇಶ್ ರೈನಾ ಅವರ ಹೆಸರಿನಲ್ಲಿ ಈವರೆಗೆ ಇತ್ತು. ಅವರು ಒಟ್ಟು 109 ಕ್ಯಾಚ್ ಪಡೆದಿದ್ದಾರೆ.
ಐಪಿಎಲ್‌ನಲ್ಲಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್‌ಗಳು
ಆರ್‌ಸಿಬಿಗೆ ಸೋಲು
ರಾಜಸ್ಥಾನ ರಾಯಲ್ಸ್ ವಿರುದ್ಧ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 183 ರನ್ ಗಳಿಸಿತು. ಅತ್ಯುತ್ತಮ ಇನಿಂಗ್ಸ್ ಕಟ್ಟಿದ ಕೊಹ್ಲಿ, ಐಪಿಎಲ್‌ನಲ್ಲಿ ದಾಖಲೆಯ 8ನೇ ಶತಕ (113 ರನ್) ಸಿಡಿಸಿ ತಮ್ಮ ತಂಡಕ್ಕೆ ನೆರವಾದರು.
ಗುರಿ ಬೆನ್ನತ್ತಿದ ರಾಯಲ್ಸ್, ಇನ್ನೂ 5 ಎಸೆತ ಬಾಕಿ ಇರುವಂತೆಯೇ 189 ರನ್ ಗಳಿಸಿ, ಜಯದ ನಗೆ ಬೀರಿತು. ಗೆಲ್ಲಲು ಒಂದು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸಿ ಶತಕ ಪೂರೈಸಿಕೊಂಡ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ (100 ರನ್) ಹಾಗೂ ನಾಯಕ ಸಂಜು ಸ್ಯಾಮ್ಸನ್ (69 ರನ್) ರಾಯಲ್ಸ್‌ಗೆ ಉಪಯುಕ್ತ ಕಾಣಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.