ಮುಂಬೈ: ಭಾರತ ಕ್ರಿಕೆಟ್ ತಂಡದಲ್ಲಿ ಮರಳಿ ಸ್ಥಾನ ಪಡೆಯುವತ್ತ ಗುರಿಯಿಟ್ಟಿರುವ ಶ್ರೇಯಸ್ ಅಯ್ಯರ್ ಅವರನ್ನು ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಮುಂಬೈ ತಂಡಕ್ಕೆ ನಾಯಕರನ್ನಾಗಿ ನೇಮಕ ಮಾಡಲಾಗಿದೆ.
ಇದೇ 23 ರಿಂದ ಡಿಸೆಂಬರ್ 15ರವರೆಗೆ ಟೂರ್ನಿಯು ನಡೆಯಲಿದೆ. ರಣಜಿ ಟ್ರೋಫಿ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿದ್ದಾರೆ.
ರಣಜಿ ಟೂರ್ನಿಯಲ್ಲಿ ಅಯ್ಯರ್ ಉತ್ತಮ ಲಯದಲ್ಲಿದ್ದರು. 452 ರನ್ ಗಳಿಸಿದ್ದಾರೆ. ಅದರಲ್ಲಿ 2 ಶತಕಗಳಿವೆ. ಒಡಿಶಾ ಎದುರು ಅವರು 228 ಎಸೆತಗಳಲ್ಲಿ 233 ರನ್ ಹೊಡೆದಿದ್ದರು. ಆರಂಭಿಕ ಬ್ಯಾಟರ್ ಪೃಥ್ವಿ ಶಾ ಕೂಡ ತಂಡದಲ್ಲಿದ್ದಾರೆ.
ತಂಡ: ಶ್ರೇಯಸ್ ಅಯ್ಯರ್ (ನಾಯಕ), ಪೃಥ್ವಿ ಶಾ, ಅಂಗಕ್ರಿಷ್ ರಘುವಂಶಿ, ಜೈ ಬಿಸ್ತ್, ಅಜಿಂಕ್ಯ ರಹಾನೆ, ಸಿದ್ಧೇಶ್ ಲಾಡ್, ಸೂರ್ಯಾಂಶ್ ಶೆಡ್ಗೆ, ಸಾಯಿರಾಜ್ ಪಾಟೀಲ, ಹಾರ್ದಿಕ್ ತಮೋರೆ (ವಿಕೆಟ್ಕೀಪರ್), ಆಕಾಶ್ ಆನಂದ್ (ವಿಕೆಟ್ಕೀಪರ್), ಶಮ್ಸ್ ಮುಲಾನಿ, ಹಿಮಾಂಶು ಸಿಂಗ್, ತನುಷ್ ಕೋಟ್ಯಾನ್, ಶಾರ್ದೂಲ್ ಠಾಕೂರ್, ಮೋಹಿತ್ ಅವಸ್ತಿ, ರಾಯ್ಸ್ಟನ್ ದಿಯಾಸ್, ಜುನೇದ್ ಖಾನ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.