ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಸರಣಿಯ ಕೊನೆಯ ಮತ್ತು ಮೂರನೇ ಟೆಸ್ಟ್ನಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಅನಾರೋಗ್ಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಜಸ್ಪ್ರೀತ್ ಬೂಮ್ರಾ ಬದಲಿಗೆ ವೇಗಿ ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ.
ಈ ಪಂದ್ಯದಲ್ಲಿ ಗೆದ್ದು ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳುವ ಒತ್ತಡದಲ್ಲಿ ಆತಿಥೇಯ ಬಳಗವಿದೆ.
ಭಾರತ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್ ತಂಡ: ಟಾಮ್ ಲ್ಯಾಥಮ್, ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ, ಮ್ಯಾಟ್ ಹೆನ್ರಿ, ಅಜಾಜ್ ಪಟೇಲ್ ಮತ್ತು ವಿಲಿಯಂ ಒರೂರ್ಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.