ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಭಾರತ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಕರ್ನಾಟಕದ ರಾಜೇಶ್ವರಿ ಗಾಯಕವಾಡ ಅವರು ಈ ಬಳಗದಲ್ಲಿ ಸ್ಥಾನ ಗಳಿಸಿದ್ದಾರೆ.
ಅಕ್ಟೋಬರ್ 1ರಿಂದ 15ರವರೆಗೆ ಟೂರ್ನಿ ನಡೆಯಲಿದೆ. ಈಚೆಗೆ ಇಂಗ್ಲೆಂಡ್‌ನಲ್ಲಿ ಆಡಿದ ಟಿ20 ತಂಡವನ್ನೇ ಇಲ್ಲಿ ಉಳಿಸಿಕೊಳ್ಳಲಾಗಿದೆ. ಕೌರ್ ಬಳಗವು ಏಷ್ಯಾ ಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಅ.7ರಂದು ಪಾಕಿಸ್ತಾನ ವಿರುದ್ಧ ಆಡಲಿದೆ.
ಬಿಸಿಸಿಐ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ತಂಡವನ್ನು ಆಯ್ಕೆ ಮಾಡಿದೆ. ಕಾರ್ಯದರ್ಶಿ ಜಯ್ ಶಾ ಪ್ರಕಟಿಸಿದ್ದಾರೆ.
ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಸಬಿನೆನಿ ಮೇಘನಾ, ರಿಚಾ ಘೋಷ್ (ವಿಕೆಟ್‌ಕೀಪರ್), ಸ್ನೇಹಾ ರಾಣಾ, ದಯಾಳನ್ ಹೇಮಲತಾ, ಮೇಘನಾ ಸಿಂಗ್, ರೇಣುಕಾ ಠಾಕೂರ್, ಪೂಜಾ ವಸ್ತ್ರಕರ್, ರಾಜೇಶ್ವರ್ ಗಾಯಕವಾಡ, ರಾಧಾ ಯಾದವ್, ಕೆ.ಪಿ. ನವಗಿರೆ.
ಮೀಸಲು: ತಾನಿಯಾ ಭಾಟಿಯಾ, ಸಿಮ್ರನ್ ದಿಲ್ ಬಹಾದ್ದೂರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.