ADVERTISEMENT

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಪಾಕ್: ಸಾಮಾಜಿಕ ತಾಣಗಳಲ್ಲಿ ಮೀಮ್ಸ್‌ಗಳ ಅಲೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜೂನ್ 2024, 7:51 IST
Last Updated 15 ಜೂನ್ 2024, 7:51 IST
   

ಬೆಂಗಳೂರು: ಟಿ20 ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿದ್ದಿದ್ದು, ಪಾಕ್ ತಂಡದ ಕಳಪೆ ಪ್ರದರ್ಶನ ವಿರುದ್ಧ ಅಭಿಮಾನಿಗಳು ನಿರಾಶೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ತಂಡದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೀಮ್ಸ್‌ಗಳ ಹರಿದಾಡುತ್ತಿವೆ.

ಮಳೆಯಿಂದ ಅಮೆರಿಕ ಮತ್ತು ಐರ್ಲೆಂಡ್ ತಂಡಗಳ ನಡುವಿನ ಪಂದ್ಯ ರದ್ದಾಗಿದ್ದು, ಎರಡು ತಂಡಗಳಿಗೂ ಒಂದೊಂದು ಅಂಕ ನೀಡಲಾಯಿತು. ‘ಎ’ ಗುಂಪಿನಲ್ಲಿ ಅಮೆರಿಕ ನಾಲ್ಕು ಪಂದ್ಯಗಳಿಂದ ಐದು ಅಂಕ ಗಳಿಸಿ, ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಆದರೆ ಪಾಕಿಸ್ತಾನ ತಂಡವು ಮೂರು ಪಂದ್ಯಗಳಿಂದ ಎರಡು ಅಂಕ ಮಾತ್ರ ಸಂಪಾದಿಸಿತ್ತು. ಹಾಗಾಗಿ ಪಾಕ್ ಟೂರ್ನಿಯಿಂದ ಹೊರಬೀಳಬೇಕಾಯಿತು.

2009ರಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿತ್ತು. ಜೂನ್ 6ರಂದು ನಡೆದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ  ಸೋಲುನುಭವಿಸಿತ್ತು. ಜೂನ್ 9 ರಂದು ತನ್ನ ಸಾಂಪ್ರದಾಯಿಕ ಎದುರಾಳಿ ಭಾರತ ತಂಡದ ವಿರುದ್ಧ ಪರಾಭವಗೊಂಡಿತು. ಜೂನ್ 11 ರಂದು ಕೆನಡಾ ವಿರುದ್ಧ ಪಂದ್ಯದಲ್ಲಿ ಮಾತ್ರ ಪಾಕ್ ಗೆಲುವು ಸಾಧಿಸಿತ್ತು.

ADVERTISEMENT

ನಿನ್ನೆಯ ಪಂದ್ಯದಲ್ಲಿ ಅಮೆರಿಕ ಸೋತಿದ್ದರೆ ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡವು ಸೂಪರ್ 8ರ ಘಟ್ಟ ಪ್ರವೇಶಿಸುವ ಆಸೆ ಜೀವಂತವಾಗಿರುತ್ತಿತ್ತು. ಆದರೆ ಮಳೆ ಅದಕ್ಕೆ ಅವಕಾಶ ನೀಡಲಿಲ್ಲ. ಪಾಕಿಸ್ತಾನ ಗುಂಪಿನಲ್ಲಿ ತನ್ನ ಕೊನೆಯ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.