ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಎಡಗೈ ಮಧ್ಯಮವೇಗಿ ಮೊಹಮ್ಮದ್ ಆಮಿರ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
’ಪ್ರಸಕ್ತ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧಿಕಾರದಲ್ಲಿ ನಾನು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರತಿಯೊಂದು ಹಂತದಲ್ಲಿಯೂ ನನಗೆ ತಡೆಯೊಡ್ಡುವ ಮತ್ತು ಅವಮಾನಿಸುವ ಕಾರ್ಯ ನಡೆಯುತ್ತಿದೆ. ನನ್ನ ಬಗ್ಗೆ ಸಾರ್ವ ಜನಿಕವಾಗಿ ಕೆಟ್ಟ ಅಭಿಪ್ರಾಯ ಮೂಡಿಸಲಾಗುತ್ತಿದೆ. ಭವಿಷ್ಯದ ಹಿತದೃಷ್ಟಿಯಿಂದ ನಾನು ವಿದಾಯ ಹೇಳುತ್ತಿದ್ದೇನೆ‘ ಎಂದು ಮೊಹಮ್ಮದ್ ಆಮಿರ್ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಈಗಾಗಲೇ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಅಮೀರ್ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾನಸಿಕ ಕಿರುಕುಳವೇ ವಿದಾಯ ಘೋಷಿಸಲು ಕಾರಣ,ಈ ಬಗ್ಗೆ ಮುಂದಿನ ದಿನಗಳಲ್ಲಿ ವಿವರವಾಗಿ ಹೇಳುವೆ ಎಂದೂ ತಿಳಿಸಿದ್ದಾರೆ. ನಾನು ನಿಷೇಧ ಶಿಕ್ಷೆ ಅನುಭವಿಸಿ ಬಂದ ಮೇಲೂ ನನಗೆ ತಂಡದಲ್ಲಿ ಮತ್ತೆ ಆಡಲು ಅವಕಾಶ ನೀಡಿದ ಶಾಹೀದ್ ಆಫ್ರಿದಿ ಅವರಿಗೆ ಚಿರಋಣಿಯಾಗಿದ್ದೇನೆ ಎಂದು ಆಮಿರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.