ADVERTISEMENT

PCB ಹಿಂಸೆ: ಅಂತರರಾಷ್ಟ್ರೀಯ ಕ್ರಿಕೆಟಿಗೆ ಪಾಕ್ ವೇಗಿ ಮೊಹಮ್ಮದ್‌ ಅಮೀರ್‌ ವಿದಾಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 11:18 IST
Last Updated 17 ಡಿಸೆಂಬರ್ 2020, 11:18 IST
ಮೊಹಮ್ಮದ್‌ ಅಮೀರ್‌
ಮೊಹಮ್ಮದ್‌ ಅಮೀರ್‌    

ಇಸ್ಲಾಮಾಬಾದ್‌: ಪಾಕಿಸ್ತಾನ ತಂಡದ ಎಡಗೈ ವೇಗಿ ಮೊಹಮ್ಮದ್‌ ಅಮೀರ್‌ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಅಮೀರ್‌ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ಗುರುವಾರವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮಾನಸಿಕ ಕಿರುಕುಳವೇ ವಿದಾಯ ಘೋಷಿಸಲು ಕಾರಣ,ಈ ಬಗ್ಗೆ ಮುಂದಿನ ದಿನಗಳಲ್ಲಿ ವಿವರವಾಗಿ ಹೇಳುವೆ ಎಂದು ಅಮೀರ್‌ ಹೇಳಿದ್ದಾರೆ.

ADVERTISEMENT

ಪ್ರಾಮಾಣಿಕವಾಗಿ ಹೇಳಬೇಕಾದರೆ ಪಿಸಿಬಿ ಜೊತೆ ಕೆಲಸ ಮಾಡಲು ಸಾಧ್ಯವಿಲ್ಲ, ವ್ಯವಸ್ಥಾಪನ ಮಂಡಳಿಯ ನಡವಳಿಕೆಯಿಂದ ನಾನು ಸಾಕಷ್ಟು ನೊಂದಿದ್ದೇನೆ, ಮಾನಸಿಕವಾಗಿ ಹಿಂಸೆ ಅನುಭವಿಸಿದ್ದೇನೆ. 2010–2015ರ ವರೆಗೂ ಪಿಸಿಬಿ ನನ್ನ ನಡೆಸಿಕೊಂಡ ರೀತಿಗೆ ನೋವಾಗಿದೆ, ಇನ್ನು ಪಿಸಿಬಿ ಜೊತೆ ಕೆಲಸ ಮಾಡಲು ಸಾಧ್ಯವಿಲ್ಲ ಆಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಿಷೇಧದ ಬಳಿಕ ಪಾಕಿಸ್ತಾನ ತಂಡದಲ್ಲಿ ನನಗೆ ಮತ್ತೆ ಅವಕಾಶ ನೀಡಿದ ಆಫ್ರಿದಿ ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಅಮೀರ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.