ADVERTISEMENT

ಮುಂದಿನ ಕ್ರಮ ಕೈಗೊಳ್ಳುವ ವರೆಗೆ ಪಾಂಡ್ಯ, ರಾಹುಲ್‌ ಅಮಾನತು: ವಿನೋದ್‌ ರಾಯ್‌

‘ಕಾಫಿ ವಿದ್‌ ಕರಣ್‌’

​ಪ್ರಜಾವಾಣಿ ವಾರ್ತೆ
Published 11 ಜನವರಿ 2019, 11:29 IST
Last Updated 11 ಜನವರಿ 2019, 11:29 IST
   

ನವದೆಹಲಿ:ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ‍ಪಾಂಡ್ಯ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್‌.ರಾಹುಲ್ ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ವರೆಗೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಕ್ರಿಕೆಟ್ ಆಡಳಿತ ಸಮಿತಿ (ಸಿಒಎ) ಮುಖ್ಯಸ್ಥ ವಿನೋದ್‌ ರಾಯ್ ಶುಕ್ರವಾರ ಹೇಳಿದ್ದಾರೆ.

ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಾರ್ದಿಕ್ ‍ಪಾಂಡ್ಯ ಮತ್ತು ಕೆ.ಎಲ್‌.ರಾಹುಲ್ ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ವರೆಗೆ ಅವರನ್ನು ಅಮಾನತು ಮಾಡಬೇಕು ಎಂದು ಕ್ರಿಕೆಟ್ ಆಡಳಿತ ಸಮಿತಿ (ಸಿಒಎ) ಸದಸ್ಯೆ ಡಯಾನಾ ಎಡುಲ್ಜಿ ಇಂದು ಶಿಫಾರಸು ಮಾಡಿದ್ದರು.

ಪಾಂಡ್ಯ ಮತ್ತು ರಾಹುಲ್‌ ಇಬ್ಬರನ್ನೂ ಅಮಾನತು ಮಾಡಲಾಗಿದ್ದು, ವಿಚಾರಣೆ ಬಾಕಿ ಇದೆ ಎಂದು ರಾಯ್‌ ಹೇಳಿದ್ದಾರೆ.

ADVERTISEMENT

ಈ ಇಬ್ಬರ ಮೇಲೆ ನಿಷೇಧ ಹೇರಬೇಕು ಎಂದುವಿನೋದ್ ರಾಯ್‌ ಅವರು ಗುರುವಾರ ಶಿಫಾರಸು ಮಾಡಿದ್ದರು.

ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿದ್‌ ಕರಣ್‌’ ಸೆಲೆಬ್ರಿಟಿ ಚಾಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಈ ಇಬ್ಬರು ಆಟಗಾರರು ತಾವನುಭವಿಸಿದ ಲೈಂಗಿಕತೆಯ ಕುರಿತು ಮಾತನಾಡಿದ್ದರು. ಇದು ವಿವಾದದ ರೂಪ ಪಡೆದುಕೊಳ್ಳುತ್ತಿದ್ದಂತೆ ಕ್ಷಮೆ ಕೋರಿದ್ದರು. ಆದರೆ ನೋಟಿಸ್ ಜಾರಿಗೊಳಿಸಿದ್ದ ಬಿಸಿಸಿಐ 24 ತಾಸು ಒಳಗೆ ಉತ್ತರ ನೀಡುವಂತೆ ತಾಕೀತು ಮಾಡಿತ್ತು.

‘ಅನೇಕ ಮಹಿಳೆಯರ ಜೊತೆ ಲೈಂಗಿಕ ಸುಖ ಅನುಭವಿಸಿದ್ದೇನೆ. ಮೊದಲ ಲೈಂಗಿಕ ಅನುಭವವನ್ನು ಮನೆಯಲ್ಲಿ ಹೇಳಿದಾಗ ಪಾಲಕರು ಉದಾರವಾಗಿ ನಡೆದುಕೊಂಡಿದ್ದರು’ ಎಂದು ಹಾರ್ದಿಕ್ ಪಾಂಡ್ಯ ಕಾರ್ಯಕ್ರಮದಲ್ಲಿ ಹೇಳಿದ್ದರು. ರಾಹುಲ್‌, ‘ನಾನು 18 ವರ್ಷದವನಿದ್ದಾಗ ಜೇಬಿನಲ್ಲಿ ಕಾಂಡೋಮ್ ಪ್ಯಾಕೆಟ್ ಇರಿಸಿಕೊಂಡು ಮನೆಯಲ್ಲಿ ಸಿಕ್ಕಿಬಿದ್ದಿದ್ದೆ’ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.