ನವದೆಹಲಿ: ‘ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ (ಐಸಿಸಿ) ಹೊಸ ಮಾರ್ಗಸೂಚಿಗಳ ಅನುಸಾರ ಆಡುವುದು ಆಟಗಾರರಿಗೆ ಕಿರಿಕಿರಿ ಉಂಟುಮಾಡುತ್ತದೆ’ ಎಂದು ಶ್ರೀಲಂಕಾದ ಹಿರಿಯ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ‘ಕ್ರಿಕೆಟ್ ಕನೆಕ್ಟೆಡ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ‘ಹೊಸ ಮಾರ್ಗಸೂಚಿಗಳಿಂದಾಗಿ ಆಟಗಾರರ ಕೈ ಕಟ್ಟಿಹಾಕಿದಂತಾಗಿದೆ. ಉಸಿರುಗಟ್ಟಿದ ವಾತಾವರಣದಲ್ಲಿ ಆಡೋದು ಎಷ್ಟು ಕಷ್ಟ ಎಂಬುದು ನನಗೂ ಅರ್ಥವಾಗುತ್ತದೆ’ ಎಂದಿದ್ದಾರೆ.
‘ಇದು ಸಂಕಷ್ಟದ ಸಮಯ. ಈಗ ಆಟಗಾರರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲೇಬೇಕಿದೆ. ಇದನ್ನು ಕ್ರಿಕೆಟಿಗರೂ ಅರ್ಥಮಾಡಿಕೊಳ್ಳಬೇಕಿದೆ. ಸರ್ಕಾರ ಹಾಗೂ ಆರೋಗ್ಯ ಸಚಿವಾಲಯಗಳ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕಿದೆ. ಜೊತೆಗೆ ಕಿರಿಯ ಹಾಗೂ ಹಿರಿಯ ನಾಗರೀಕರಲ್ಲೂ ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ’ ಎಂದು ಮೆರಿಲೆಬೋನ್ ಕ್ರಿಕೆಟ್ ಕ್ಲಬ್‌ನ (ಎಂಸಿಸಿ) ಅಧ್ಯಕ್ಷರೂ ಆಗಿರುವ ಅವರು ನುಡಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.