ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ರಾಜೀವ ಶುಕ್ಲಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಉಪಾಧ್ಯಕ್ಷರಾಗಿ ನೇಮಕವಾಗಲಿದ್ದಾರೆ. ಈ ಹಿಂದೆ ಎನ್. ಶ್ರೀನಿವಾಸನ್ ಅವರು ಬಿಸಿಸಿಐ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಉಪಾಧ್ಯಕ್ಷರಾಗಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಆಡಳಿತ ಸಮಿತಿಯ ಮುಖ್ಯಸ್ಥರಾಗಿದ್ದರು. ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಶುಕ್ಲಾ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.