ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರೆವೇರಿದೆ. ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಅವರು ರಾಮನ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾಜಿ ಬೌಲರ್ ದಾನಿಶ್ ಕನೇರಿಯಾ, ‘ಶತಮಾನಗಳ ಕಾಯುವಿಕೆ ಅಂತ್ಯಗೊಂಡಿದೆ, ಪ್ರತಿಜ್ಞೆ ಈಡೇರಿದೆ, ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪೂರ್ಣಗೊಂಡಿದೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅನಿಲ್ ದಲ್ಪತ್ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಆಗಿ ದಾನಿಶ್ ಕನೇರಿಯಾ ಗುರುತಿಸಿಕೊಂಡಿದ್ದರು. ದನೀಶ್ 61 ಟೆಸ್ಟ್ ಪಂದ್ಯಗಳಲ್ಲಿ ಹಾಗೂ 18 ಏಕದಿನ ಪಂದ್ಯಗಳಲ್ಲಿ ಆಡಿದ್ದರು.
ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಅವರೂ ಇನ್‌ಸ್ಟಾಗ್ರಾಮ್‌ನಲ್ಲಿ ಶುಭಾಶಯ ಕೋರಿದ್ದಾರೆ. ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರೆವೇರಿದೆ. ಈ ಶುಭ ಸಂದರ್ಭದ ಪ್ರಯುಕ್ತ ಶುಭಾಶಯ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.