ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಧ್ಯಮವೇಗಿ ಪ್ರಸಿದ್ಧ ಕೃಷ್ಣ ಅವರು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಲು ಫಿಟ್ ಆಗಿಲ್ಲ.
ಹೋದ ವರ್ಷದ ಆಗಸ್ಟ್‌ನಿಂದಲೇ ಬೆನ್ನುನೋವಿನಿಂದ ಬಳಲುತ್ತಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಅವರು ಐಪಿಎಲ್‌ನಲ್ಲಿ ಆಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಅವರು ರಾಜಸ್ಥಾನ ರಾಯಲ್ಸ್ ತಂಡದಲ್ಲಿದ್ದಾರೆ. ಬೆಂಗಳೂರಿನ 26 ವರ್ಷದ ಪ್ರಸಿದ್ಧ ಈಚೆಗೆ ರಣಜಿ ಟ್ರೋಫಿ ಟೂರ್ನಿಯಲ್ಲಿಯೂ ಆಡಿರಲಿಲ್ಲ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.