ನವದೆಹಲಿ: ಕಾರು ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಆದರೆ ಅವರ ಕಾಲು ನೋವು ಇನ್ನೂ ಹಾಗೇ ಇದೆ. ಎಂಆರ್‌ಐ ಸ್ಕ್ಯಾನಿಂಗ್ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
2022 ಡಿಸೆಂಬರ್ 30ರಂದು ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡಿದ್ದರು. ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು.
ತಲೆ, ಬೆನ್ನು, ಮಂಡಿ, ಕಾಲಿಗೆ ಗಾಯಗಳಾಗಿದ್ದವು. ಅಪಘಾತದಲ್ಲಿ ಕಾರು ಸುಟ್ಟು ಹೋಗಿದ್ದರೂ, ಪಂತ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು.
ರಸ್ತೆ ಗುಂಡಿ ತಪ್ಪಿಸಲು ಹೋಗಿ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದರು.
ಇವನ್ನೂ ಓದಿ:
ಅಗತ್ಯವಿದ್ದರೆ ಪಂತ್ ಅವರನ್ನು ದೆಹಲಿಗೆ ಏರ್ಲಿಫ್ಟ್ ಮಾಡಲಾಗುವುದು: ಡಿಡಿಸಿಎ
ಅಮ್ಮನಿಗೆ ಅಚ್ಚರಿ ನೀಡಲು ಹೊರಟಿದ್ದ ರಿಷಭ್ ಪಂತ್; ಅಪಘಾತಕ್ಕೆ ಕಾರಣ ಏನು?
ಕಾರು ನಿಧಾನವಾಗಿ ಚಲಾಯಿಸಿ - 2019ರಲ್ಲೇ ರಿಷಭ್ಗೆ ಸಲಹೆ ನೀಡಿದ್ದ ಧವನ್
ಮಾತೃ ವಿಯೋಗದ ನೋವಿನ ನಡುವೆಯೂ ರಿಷಭ್ ಪಂತ್ ಯೋಗಕ್ಷೇಮ ಕೋರಿದ ಮೋದಿ
Video| ರಿಷಭ್ ಪಂತ್ ಕಾರು ಅಪಘಾತದ ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.