ಢಾಕಾ: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಆಡುತ್ತಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಚಿತಪಡಿಸಿದೆ.
ಢಾಕಾದಲ್ಲಿ ಡಿಸೆಂಬರ್ 22ರಿಂದ (ಗುರುವಾರ) ಪಂದ್ಯ ನಡೆಯಲಿದೆ. ರೋಹಿತ್ ಅವರು ಎಡಗೈ ಹೆಬ್ಬೆರಳು ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.
ಡಿಸೆಂಬರ್ 7ರಂದು ನಡೆದ ಬಾಂಗ್ಲಾದೇಶ ಎದುರಿನ ಎರಡನೇ ಏಕದಿನ ಪಂದ್ಯದ ವೇಳೆ ಅವರಿಗೆ ಗಾಯವಾಗಿತ್ತು.
ಏಕದಿನ ಸರಣಿಯನ್ನು ಭಾರತ 2–3ರಿಂದ ಕಳೆದುಕೊಂಡಿತ್ತು.
ಛತ್ತೋಗ್ರಾಮ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 188 ರನ್‌ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿತ್ತು. ಆ ಟೆಸ್ಟ್‌ನಲ್ಲಿ ರೋಹಿತ್ ಆಡಿರಲಿಲ್ಲ.
ಸ್ನಾಯು ಸೆಳೆತಕ್ಕೆ ತುತ್ತಾಗಿರುವ ವೇಗಿ ನವದೀಪ್ ಸೈನಿ, ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.