ಓವಲ್: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೆ ಇನಿಂಗ್ಸ್‌ನಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಮೋಘ ಶತಕ ದಾಖಲಿಸಿದ್ದಾರೆ.
2013ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರೋಹಿತ್, ವಿದೇಶದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತವರಿನ ಟೆಸ್ಟ್ ಪಂದ್ಯಗಳಲ್ಲಿ ಅವರು 7 ಶತಕ ದಾಖಲಿಸಿದ್ದಾರೆ.
ಮೋಯಿನ್ ಅಲಿ ಎಸೆತದಲ್ಲಿ ಸಿಕ್ಸರ್ ಹೊಡೆಯುವ ಮೂಲಕ ರೋಹಿತ್ ಶರ್ಮಾ ಶತಕ ದಾಖಲಿಸಿದ್ದು, ವಿಶೇಷವಾಗಿತ್ತು.
ಮೊದಲ ಇನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆ ಅನುಭವಿಸಿದ್ದ ಭಾರತಕ್ಕೆ ಚೇತರಿಕೆ ನೀಡಿದ ರೋಹಿತ್, ಕೆ.ಎಲ್. ರಾಹುಲ್ ಜೊತೆಗೂಡಿ 83 ರನ್‌ಗಳ ಜೊತೆಯಾಟ ನೀಡಿದರು. ರಾಹುಲ್ 46 ರನ್ ಗಳಿಸಿ ನಿರ್ಗಮಿಸಿದ ಬಳಿಕ ಚೆತೇಶ್ವರ್ ಪೂಜಾರ ಜೊತೆ ಇನಿಂಗ್ಸ್ ಕಟ್ಟುತ್ತಿದ್ದಾರೆ.
ಮೊದಲ ಇನಿಂಗ್ಸ್‌ನ ಹಿನ್ನಡೆಯಿಂದ ಹೊರಬಂದಿರುವ ಭಾರತ ಲೀಡ್ ಪಡೆದಿದೆ.
ಚಹಾ ವಿರಾಮದ ವೇಳೆಗೆ ಭಾರತ 1 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿದ್ದು, ಎರಡನೇ ಇನಿಂಗ್ಸ್‌ನಲ್ಲಿ 100 ರನ್ ಮುನ್ನಡೆ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.