ದುಬೈ: ಭಾರತದ ಸೀಮಿತ ಓವರ್‌ಗಳ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಮೂರು ಮತ್ತು ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ಎದುರಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಅರ್ಧಶತಕ ಗಳಿಸಿದ್ದರು. ಅದರಿಂದಾಗಿ ಅವರು 50 ಅಂಕಗಳನ್ನು ಗಳಿಸಿದರು. ಅವರ ಖಾತೆಯಲ್ಲಿ ಈಗ 807 ಪಾಯಿಂಟ್‌ಗಳಿವೆ. ಕೊಹ್ಲಿ 828 ಅಂಕಗಳನ್ನು ಹೊಂದಿದ್ದಾರೆ.
ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಅವರ ಸಹ ಆಟಗಾರ ಫಕ್ರ್ ಜಮಾನ್ ಮತ್ತು ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಅಗ್ರ 10ರಲ್ಲಿ ಸ್ಥಾನ ಗಳಿಸಿದ್ದಾರೆ.
ಬೌಇಂಗ್‌ನಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಲ್‌ರೌಂಡರ್ ಪಟ್ಟಿಯಲ್ಲಿ ರವೀಂದ್ರ ಜಡೇಜ ಎಂಟನೇ ಮತ್ತು ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ನಾಲ್ಕು ಸ್ಥಾನಗಳ ಬಡ್ತಿ ಪಡೆದಿದ್ದಾರೆ. ಒಮನ್ ತಂಡದ ಜತಿಂದರ್ ಸಿಂಗ್ ಈಚೆಗೆ ಯುಎಇ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ್ದರು. ಅದರಿಂದಾಗಿ 26 ಸ್ಥಾನಗಳ ಬಡ್ತಿ ಪಡೆದು ಅಗ್ರ 100ರೊಳಗೆ ಪ್ರವೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.