ADVERTISEMENT

ICC Rankings: ಪಾಕ್ ವಿರುದ್ಧ ರೋಹಿತ್ ಅಬ್ಬರ; 6ನೇ ಸ್ಥಾನಕ್ಕೆ ಬಡ್ತಿ

ಪಿಟಿಐ
Published 18 ಅಕ್ಟೋಬರ್ 2023, 10:46 IST
Last Updated 18 ಅಕ್ಟೋಬರ್ 2023, 10:46 IST
<div class="paragraphs"><p>ರೋಹಿತ ಶರ್ಮಾ</p></div>

ರೋಹಿತ ಶರ್ಮಾ

   

(ಪಿಟಿಐ ಚಿತ್ರ)

ದುಬೈ: ಪ್ರಸ್ತುತ ಸಾಗುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲೂ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ADVERTISEMENT

ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದ ರೋಹಿತ್ ಶರ್ಮಾ ಅಲ್ಲಿಂದ ಬಳಿಕ ಹಿಂತಿರುಗಿ ನೋಡಿಲ್ಲ. ಅಫ್ಗಾನಿಸ್ತಾನ ವಿರುದ್ಧ ಭರ್ಜರಿ ಶತಕ (131) ಮತ್ತು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ 86 ರನ್ ಗಳಿಸಿ ಅಬ್ಬರಿಸಿದ್ದರು.

ಈಗ ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಐದು ಸ್ಥಾನಗಳ ಬಡ್ತಿ ಪಡೆದು ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಅಲ್ಲದೆ 719 ರೇಟಿಂಗ್ ಪಾಯಿಂಟ್ ಗಳಿಸಿದ್ದಾರೆ.

ಈ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಂ (836) ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಶುಭಮನ್ ಗಿಲ್ (742) ಎರಡು ಮತ್ತು ವಿರಾಟ್ ಕೊಹ್ಲಿ ಎಂಟನೇ (711) ಸ್ಥಾನದಲ್ಲಿದ್ದಾರೆ.

ಸಿರಾಜ್‌ಗೆ 3ನೇ ಸ್ಥಾನ...

ಬೌಲಿಂಗ್ ವಿಭಾಗದಲ್ಲಿ ಭಾರತದ ಮೊಹಮ್ಮದ್ ಸಿರಾಜ್ 3ನೇ ಸ್ಥಾನದಲ್ಲಿದ್ದಾರೆ. ಸಿರಾಜ್ ಇತ್ತೀಚೆಗಷ್ಟೇ ನಂ.1 ಸ್ಥಾನ ಅಲಂಕರಿಸಿದ್ದರು. ಈ ವಿಭಾಗದಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್‌ ಅಗ್ರಸ್ಥಾನದಲ್ಲಿದ್ದು, ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಎರಡನೇ ಸ್ಥಾನದಲ್ಲಿದ್ದಾರೆ. ಅಫ್ಗಾನಿಸ್ತಾನದ ರಶೀದ್ ಖಾನ್ ಹಾಗೂ ಮುಜೀಬ್ ಉರ್ ರೆಹಮಾನ್ ಅನುಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

ಭಾರತದ ಕುಲದೀಪ್ ಯಾದವ್ 641 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.