ADVERTISEMENT

Baby Boy: ಎರಡನೇ ಮಗುವಿನ ತಂದೆಯಾದ ರೋಹಿತ್ ಶರ್ಮಾ

ಏಜೆನ್ಸೀಸ್
Published 16 ನವೆಂಬರ್ 2024, 4:55 IST
Last Updated 16 ನವೆಂಬರ್ 2024, 4:55 IST
   

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ, ಹಿಟ್‌ ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ.

ರೋಹಿತ್‌ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡು ದಂಪತಿಗೆ ಅಭಿನಂದನೆಗಳನ್ನು ಹೇಳುತ್ತಿದ್ದಾರೆ. ಆದಾಗ್ಯೂ ರೋಹಿತ್ ಅಥವಾ ರಿತಿಕಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

ADVERTISEMENT

ರೋಹಿತ್‌ ಕುಟುಂಬದ ಆಪ್ತರು ಶುಕ್ರವಾರ (ನವೆಂಬರ್ 15) ಗಂಡು ಮಗು ಜನಿಸಿದೆ ಎಂದು ಖಚಿತ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರೋಹಿತ್ ಮತ್ತು ರಿತಿಕಾ 2015ರಲ್ಲಿ ಮದುವೆಯಾದರು. 2018ರ ಡಿಸೆಂಬರ್​ನಲ್ಲಿ ಸಮೀರ ಎಂಬ ಹೆಣ್ಣು ಮಗು ಜನಿಸಿದೆ. ರೋಹಿತ್ ಮತ್ತು ರಿತಿಕಾ ಪ್ರೇಮಕಥೆ ತುಂಬಾ ಆಸಕ್ತಿದಾಯಕವಾಗಿದೆ. ರಿತಿಕಾ ಮೊದಲು ರೋಹಿತ್ ಅವರ ಮ್ಯಾನೇಜರ್ ಆಗಿದ್ದರು. ನಂತರ ಇಬ್ಬರೂ ಸ್ನೇಹಿತರಾಗಿ ಪ್ರೀತಿಯಲ್ಲಿ ಬಿದ್ದಿದ್ದರು. ಕೊನೆಗೆ ಇಬ್ಬರು ಮದುವೆಯಾದರು.

ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ರೋಹಿತ್‌ ಈ ಸರಣಿಯಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್‌ನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.