ಪರ್ತ್: ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಪರ್ತ್‌ನ ಒಪ್ಟಸ್ ಕ್ರೀಡಾಂಗಣದಲ್ಲಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.
ನವೆಂಬರ್ 15ರಂದು ರೋಹಿತ್– ರೀತಿಕಾ ದಂಪತಿಗೆ ಎರಡನೇ ಮಗುವಾಗಿತ್ತು. ಈ ವೇಳೆ ಕುಟುಂಬದ ಜೊತೆ ಕಳೆದ ಕಾರಣ ಭಾರತ ತಂಡದ ನಾಯಕ ರೋಹಿತ್ ಅವರು ಇತರ ಆಟಗಾರರ ಜೊತೆ ಆಸ್ಟ್ರೇಲಿಯಾಕ್ಕೆ ಹೊರಟಿರಲಿಲ್ಲ. ಮೊದಲ ಟೆಸ್ಟ್‌ನಲ್ಲಿ ಅವರು ಆಡುವುದು ಅನುಮಾನ ಎಂದು ಈ ಮೊದಲೇ ಆಯ್ಕೆ ಸಮಿತಿ ಪ್ರಕಟಿಸಿತ್ತು.
37 ವರ್ಷ ವಯಸ್ಸಿನ ರೋಹಿತ್ ಅನುಪಸ್ಥಿತಿಯಲ್ಲಿ ಉಪನಾಯಕ ಜಸ್‌ಪ್ರೀತ್ ಬೂಮ್ರಾ ಮೊದಲ ಟೆಸ್ಟ್‌ನಲ್ಲಿ ತಂಡದ ನಾಯಕತ್ವ ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.