ಚೆನ್ನೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಮಗಳು ರೂಪಾ ಗುರುನಾಥ್ ಅವರು ಗುರುವಾರ ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಅಧ್ಯಕ್ಷೆಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
‘ವೈಯಕ್ತಿಕ ಕಾರಣಗಳಿಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ‘ ಎಂದು ಅವರು ತಿಳಿಸಿದ್ದಾರೆ.
2019ರಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದರು. ಕ್ರಿಕೆಟ್ ಸಂಸ್ಥೆಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ನೇಮಕವಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.