ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಗ ಸಮಿತ್ ದ್ರಾವಿಡ್ ಅವರು ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ–20 ಲೀಗ್‌ನ ಹರಾಜಿನಲ್ಲಿ ಮೈಸೂರು ವಾರಿಯರ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
₹50,000 ಕೊಟ್ಟು ವಾರಿಯರ್ಸ್ ತಂಡ ಮಧ್ಯಮ ಕ್ರಮಾಂಕದ ಬ್ಯಾಟರ್ ಮತ್ತು ವೇಗದ ಬೌಲರ್ ಸಮಿತ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
‘ಕೆಎಸ್‌ಸಿಎಯಲ್ಲಿ ವಿಭಿನ್ನ ವಯೋಮಾನದ ತಂಡಗಳಲ್ಲಿ ಭರವಸೆಯ ಆಟ ಪ್ರದರ್ಶಿಸಿರುವ ಸಮಿತ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಿರುವುದು ಉತ್ತಮ ಸಂಗತಿಯಾಗಿದೆ’ಎಂದು ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಋತುವಿನ ಕೂಚ್ ಬೆಹಾರ್ ಟ್ರೋಫಿ ಗೆದ್ದ 19 ವರ್ಷದೊಳಗಿನವರ ಕರ್ನಾಟಕ ತಂಡದಲ್ಲಿ ಸಮಿತ್ ಸಹ ಇದ್ದರು. ಲಂಕಾಶೇರ್ ವಿರುದ್ಧದ ಕೆಎಸ್‌ಸಿಎ ಇಲೆವೆನ್ ತಂಡದಲ್ಲೂ ಆಡಿದ್ದಾರೆ.
ಕಳೆದ ಆವೃತ್ತಿಯ ರನ್ನರ್ ಅಪ್ ಆಗಿರುವ ವಾರಿಯರ್ಸ್ ತಂಡವನ್ನು ಕರುಣ್ ನಾಯರ್ ಮುನ್ನಡೆಸುತ್ತಿದ್ದಾರೆ. ಭಾರತ ತಂಡದ ವೇಗಿ ಪ್ರಸಿದ್ಧ ಕೃಷ್ಣ ತಂಡದಲ್ಲಿರುವುದರಿಂದ ವಾರಿಯರ್ಸ್ ತಂಡದ ಬೌಲಿಂಗ್ ಪಡೆಗೆ ಬಲ ಬಂದಿದೆ.
ಮೈಸೂರು ವಾರಿಯರ್ಸ್ ತಂಡ: ಕರುಣ್ ನಾಯರ್, ಕಾರ್ತಿಕ್ ಸಿ ಎ, ಮನೋಜ್ ಭಾಂಡಗೆ, ಕಾರ್ತಿಕ್ ಎಸ್.ಯು, ಸುಚಿತ್.ಜೆ, ಗೌತಮ್.ಕೆ, ವಿದ್ಯಾಧರ್ ಪಾಟೀಲ್, ವೆಂಕಟೇಶ್.ಎಂ, ಹರ್ಷಿಲ್ ಧರ್ಮಾನಿ, ಗೌತಮ್ ಮಿಶ್ರಾ, ಧನುಶ್ ಗೌಡ, ಸಮಿತ್ ದ್ರಾವಿಡ್, ದೀಪಕ್ ದೇವಾಡಿಗ, ಸುಮಿತ್ ಕುಮಾರ್, ಸ್ಮಯನ್ ಶ್ರೀವಾಸ್ತವ, ಜಸ್ಪರ್.ಇ.ಜೆ, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸರ್ಫರಾಜ್ ಅಶ್ರಫ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.