ಕೋಲ್ಕತ್ತ: ಪಾಕಿಸ್ತಾನದ ಮುಂಚೂಣಿ ವೇಗದ ಬೌಲರ್ ಶಹೀನ್ ಶಾ ಅಫ್ರಿದಿ ಅವರು ಐಸಿಸಿ ರ್‍ಯಾಂಕಿಂಗ್ ಪಟ್ಟಿಯ ಬೌಲರ್‌ಗಳ ವಿಭಾಗದಲ್ಲಿ ಮೊದಲ ಬಾರಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಏಳು ಸ್ಥಾನಗಳಷ್ಟು ಮೇಲೆ ನೆಗೆದ ಅವರು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಅವರನ್ನು ಪದಚ್ಯುತಗೊಳಿಸಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಪಾಕ್ ತಂಡ ಜಯಗಳಿಸಿದ ಮರುದಿನವೇ ಈ ಪಟ್ಟಿ ಬಿಡುಗಡೆಯಾಗಿದೆ. ಮಂಗಳವಾರ ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ನಡೆದ ಆ ಪಂದ್ಯದ ಸಂದರ್ಭದಲ್ಲಿ ಅವರು ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಮೈಲಿಗಲ್ಲು ದಾಟಿದ್ದರು. ತಮ್ಮ 51ನೇ ಏಕದಿನ ಪಂದ್ಯದಲ್ಲಿ 23 ರನ್ನಿಗೆ 3 ವಿಕೆಟ್ ಪಡೆದಿದ್ದರು.
ಈ ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅವರು ಈಗ ಆಸ್ಟ್ರೇಲಿಯಾದ ಆ್ಯಡಂ ಜಂಪಾ ಜೊತೆ ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದಾರೆ. ತಲಾ 16 ವಿಕೆಟ್‌ಗಳನ್ನು ಪಡೆದಿದ್ದಾರೆ.
ಮೊಹಮ್ಮದ್ ಸಿರಾಜ್ ಮತ್ತು ಎಡಗೈ ರಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಕ್ರಮವಾಗಿ ಮೂರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.
ಬ್ಯಾಟರ್‌ಗಳ ಪಟ್ಟಿಯಲ್ಲಿ ಪಾಕ್ ನಾಯಕ ಬಾಬರ್ ಆಜಂ ಅಗ್ರ್ಥಾನದಲ್ಲಿ ಮುಂದುವರಿದಿದ್ದಾರೆ. ಶುಭಮನ್ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಕ್ರಮವಾಗಿ ಎರಡು, ಐದು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.
ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಶಕಿಬ್ ಅಲ್ ಹಸನ್ ಅಗ್ರಸ್ಥಾನದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ 11ನೇ ಸ್ಥಾನಕ್ಕೆ ಸರಿದಿದ್ದಾರೆ. ರವೀಂದ್ರ ಜಡೇಜಾ 13ನೇ ಮತ್ತು ಶದಾಬ್ ಖಾನ್ 20ನೇ ಸ್ಥಾನದಲ್ಲಿ ನೆಲೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.