ಮುಂಬೈ: ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಮುಂಬೈ ತಂಡಕ್ಕೆ ಮರಳಿದ್ದಾರೆ. ಬುಧವಾರ ಆರಂಭವಾಗಲಿರುವ ಎ ಗುಂಪಿನ ಪಂದ್ಯದಲ್ಲಿ ಒಡಿಶಾ ಎದುರು ಅವರು ಆಡಲಿದ್ದಾರೆ. ಆದರೆ ಪೃಥ್ವಿ ಶಾ ಅವರನ್ನು ಕೈಬಿಡಲಾಗಿದೆ.
ತ್ರಿಪುರಾ ಎದುರು ನಡೆದಿದ್ದ ಕಳೆದ ಪಂದ್ಯದಲ್ಲಿ ಶ್ರೇಯಸ್ ಆಡಿರಲಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಅವರು ‘ರಜೆ’ ಪಡೆದಿದ್ದರು.
ಆರಂಭಿಕ ಬ್ಯಾಟರ್ ಪೃಥ್ವಿ ಅವರನ್ನು ತ್ರಿಪುರ ಪಂದ್ಯಕ್ಕೂ ಕೈಬಿಡಲಾಗಿತ್ತು. ಅಜಿಂಕ್ಯ ರಹಾನೆ ತಂಡದ ನಾಯಕರಾಗಿ ಮುಂದುವರಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.