ADVERTISEMENT

ಐಸಿಸಿ ಏಕದಿನ ರ‍್ಯಾಂಕಿಂಗ್‌: ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದ ಶುಭಮನ್ ಗಿಲ್

ಪಿಟಿಐ
Published 6 ಏಪ್ರಿಲ್ 2023, 5:25 IST
Last Updated 6 ಏಪ್ರಿಲ್ 2023, 5:25 IST
ಶುಭಮನ್ ಗಿಲ್
ಶುಭಮನ್ ಗಿಲ್   

ದುಬೈ: ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ ನಾಲ್ಕನೇ ಸ್ಥಾನ ತಲುಪಿದ್ದಾರೆ.

ಬುಧವಾರ ಪ್ರಕಟವಾದ ಪಟ್ಟಿಯಲ್ಲಿ ಗಿಲ್‌ ಅವರೊಂದಿಗೆ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ ಕೂಡ ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ. ವಿರಾಟ್‌ ಒಂದು ಸ್ಥಾನ ಬಡ್ತಿ ಪಡೆದು ಏಳನೇ ಸ್ಥಾನಕ್ಕೇರಿದ್ದರೆ, ರೋಹಿತ್‌ ಎಂಟನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ.

ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಆಜಂ ಅಗ್ರಸ್ಥಾನದಲ್ಲಿದ್ದಾರೆ.

ADVERTISEMENT

ದಕ್ಷಿಣ ಆಫ್ರಿಕಾದ ಏಡನ್ ಮರ್ಕರಂ ಅವರು 13 ಸ್ಥಾನಗಳ ಏರಿಕೆ ದಾಖಲಿಸಿ 41ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಹೆನ್ರಿ ನಿಕೊಲ್ಸ್ 69ನೇ ಸ್ಥಾನಕ್ಕೇರಿದ್ದಾರೆ.

ವೇಗಿ ಮೊಹಮ್ಮದ್ ಸಿರಾಜ್ ಅಗ್ರ 10ರೊಳಗಿನ ರ‍್ಯಾಂಕಿಂಗ್ ಪಟ್ಟಿ ಯಲ್ಲಿರುವ ಭಾರತದ ಏಕೈಕ ‌ಬೌಲರ್ ಆಗಿದ್ದಾರೆ. ಸದ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್‌ ಮತ್ತು ನ್ಯೂಜಿಲೆಂಡ್‌ನ ಟ್ರೆಂಟ್‌ ಬೌಲ್ಟ್‌ ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಭಾರತದ ಸೂರ್ಯಕುಮಾರ್ ಯಾದವ್‌ ಟಿ20 ಬ್ಯಾಟರ್‌ಗಳ ರ‍್ಯಾಂಕಿಂ ಗ್‌ನಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.