ಮೆಲ್ಬರ್ನ್: ಮುಂಬರುವ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್‌ಗೆ 15 ಸದಸ್ಯ ಬಳಗದ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.
ಆಲ್‌ರೌಂಡರ್ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದು, ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು ಕೈಬಿಡಲಾಗಿದೆ.
2024ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ 22 ವರ್ಷದ ಯುವ ಆಟಗಾರ ಫ್ರೇಸರ್ ಮೆಕ್‌ಗುರ್ಕ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
ಅನುಭವಿ ಆಟಗಾರರಾದ ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯಿನಿಸ್ ಹಾಗೂ ಮಿಚೆಲ್ ಸ್ಟಾರ್ಕ್ ತಂಡದಲ್ಲಿದ್ದಾರೆ.
ಇಂದು (ಮೇ 01) ತಂಡಗಳನ್ನು ಪ್ರಕಟಿಸಲು ಕೊನೆಯ ದಿನವಾಗಿತ್ತು. ಮೇ 25ರವರೆಗೆ ತಂಡಗಳಲ್ಲಿ ಬದಲಾವಣೆ ತರಬಹುದಾಗಿದೆ. ಆದರೆ ಇದಕ್ಕೆ ಐಸಿಸಿ ತಾಂತ್ರಿಕ ಸಮಿತಿಯ ಅನುಮೋದನೆ ಬೇಕಿದೆ.
ಆಸ್ಟ್ರೇಲಿಯಾ ತಂಡ ಇಂತಿದೆ:
ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮಿನ್ಸ್, ಟಿಮ್ ಡೇವಿಡ್, ನಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್ ಮತ್ತು ಆ್ಯಡಂ ಜಂಪಾ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.