ADVERTISEMENT

ಗಂಗೂಲಿ ಅಧಿಕಾರವಧಿ: ವಿಚಾರಣೆ ಮುಂದಕ್ಕೆ?

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 20:16 IST
Last Updated 9 ಡಿಸೆಂಬರ್ 2020, 20:16 IST
ಸೌರವ್ ಗಂಗೂಲಿ ಮತ್ತು ಜಯ್ ಶಾ
ಸೌರವ್ ಗಂಗೂಲಿ ಮತ್ತು ಜಯ್ ಶಾ   

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಲ್ಲಿ ಜಾರಿಯಾಗಿರುವ ಕೂಲಿಂಗ್ ಆಫ್ ನಿಯಮ ಪರಿಷ್ಕರಣೆಯ ಕುರಿತ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನ್ಯಾಯಪೀಠವು ಮುಂದಿನ ತಿಂಗಳಿಗೆ ಮುಂದೂಡಿದೆ ಎಂದು ತಿಳಿದುಬಂದಿದೆ.

ಇದರಿಂದಾಗಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ಇನ್ನಷ್ಟು ಕಾಲ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲಿದ್ದಾರೆ. ಕೂಲಿಂಗ್ ಆಫ್ ನಿಯಮದ ಪ್ರಕಾರ ಇವರಿಬ್ಬರ ಅಧಿಕಾರವಧಿಯು ಎರಡು ತಿಂಗಳುಗಳ ಹಿಂದೆ ಮುಗಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT